ವಿಶೇಷ

Karavali Utsava: ಡಿ.20ರಿಂದ ಮಂಗಳೂರು ಕಡಲಕಿನಾರೆಯಲ್ಲಿ ಕರಾವಳಿ ಉತ್ಸವ ಸಂಭ್ರಮ: ಬೀಚ್ ಗಳಲ್ಲಿ ಏನೇನು ಕಾರ್ಯಕ್ರಮಗಳಿವೆ?

ಮಂಗಳೂರು: ಪ್ರಸಕ್ತ ವರ್ಷದ ಕರಾವಳಿ ಉತ್ಸವ ಡಿಸೆಂಬರ್ 20ರಿಂದ ಪ್ರಾರಂಭವಾಗಲಿದ್ದು, ಜಿಲ್ಲೆಯ ವಿವಿಧ ಕಡೆಗಳಲ್ಲಿ ಆಕರ್ಷಕ ಸಾಂಸ್ಕೃತಿಕ ಮತ್ತು  ಸಾಹಸಮಯ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು  ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ  ತಿಳಿಸಿದ್ದಾರೆ.ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ  ಕರಾವಳಿ ಉತ್ಸವ ಸಿದ್ಧತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

PIC FROM INTERNET

ಕರಾವಳಿ ಉತ್ಸವ ಮೈದಾನದಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯ ಕಡಲ ತೀರಗಳಿಗೆ  ಪ್ರವಾಸಿಗರನ್ನು ಆಕರ್ಷಿಸಲು  6 ಬೀಚ್‍ಗಳಲ್ಲಿ ಕರಾವಳಿ ಉತ್ಸವದ ಅಂಗವಾಗಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಪಣಂಬೂರು, ಉಳ್ಳಾಲ, ಸೋಮೇಶ್ವರ, ಸಸಿಹಿತ್ಲು, ತಣ್ಣೀರು ಬಾವಿ ಮತ್ತು ಬ್ಲೂ ಫ್ಲಾಗ್ ಬೀಚ್‍ಗಳಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದರು.

ಜಾಹೀರಾತು

PIC FROM INTERNET

ಯಾವ ಬೀಚ್ ನಲ್ಲಿ ಏನೇನಿದೆ?

ಸಸಿಹಿತ್ಲು   ಬೀಚ್‍ನಲ್ಲಿ   ಸಾಹಸ   ಕ್ರೀಡೆಗಳು,  ತಣ್ಣೀರುಬಾವಿ ಬ್ಲೂ ಫ್ಲಾಗ್ ಬೀಚ್‍ನಲ್ಲಿ ವೈನ್ ಚೀಸ್ ಕೇಕ್ ಫೆಸ್ಟ್, ತಣ್ಣೀರು ಬಾವಿ ಬೀಚ್‍ನಲ್ಲಿ  ಮ್ಯೂಸಿಕ್ ಫೆಸ್ಟಿವಲ್ ಮತ್ತು ಟ್ರಯತ್ಲಾನ್, ಉಳ್ಳಾಲ ಬೀಚ್‍ನಲ್ಲಿ ಫುಟ್‍ಬಾಲ್, ವಾಲಿಬಾಲ್ ಮತ್ತು ಮತ್ತಿತರ ಕ್ರೀಡೆಗಳು, ಪಣಂಬೂರ್ ಬೀಚ್‍ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಸೋಮೇಶ್ವರ ಬೀಚ್‍ನಲ್ಲಿ ಸಂಗೀತ ಸಂಜೆ ಮತ್ತು ಯೋಗ ಕಾರ್ಯಕ್ರಮ ನಡೆಯಲಿದೆ ಎಂದು  ಅವರು ತಿಳಿಸಿದರು.

ಸಾರ್ವಜನಿಕರಿಗೆ ಆಕರ್ಷಿಸುವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಅದಲ್ಲದೆ ಎಲ್ಲಾ ಬೀಚ್‍ಗಳಲ್ಲಿ ಆಹಾರ  ಉತ್ಸವಗಳು ನಡೆಯಲಿದ್ದು, ವೈವಿಧ್ಯಮಯ ತಿಂಡಿ ತಿನಿಸುಗಳ ಮೇಳ ನಡೆಯಲಿದೆ ಎಂದು ಅವರು ತಿಳಿಸಿದರು. ಕದ್ರಿ ಪಾರ್ಕ್‍ನಲ್ಲಿ ಕಲಾ ಪರ್ಬ ಕಾರ್ಯಕ್ರಮ, ಫಲಪುಷ್ಪ ಪ್ರದರ್ಶನ ನಡೆಯಲಿದೆ. ಮಂಗಳೂರು ನಗರದಲ್ಲಿ ಚಲನಚಿತ್ರ ಉತ್ಸವ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

photo by harish mambady

ನೆಹರೂ ಮೈದಾನದಲ್ಲಿ ಫುಟ್ ಬಾಲ್ ಕ್ರೀಡಾ ಸ್ಪರ್ಧೆ:

ಡಿಸೆಂಬರ್ 27 ಮತ್ತು 28 ರಂದು ನೆಹರು ಮೈದಾನದ ಫುಟ್‍ಬಾಲ್ ಕ್ರೀಡಾಂಗಣದಲ್ಲಿ ಫುಟ್‍ಬಾಲ್ ಕ್ರೀಡಾ  ಸ್ಪರ್ಧೆ ನಡೆಯಲಿದೆ. ಪಿಳಿಕುಳ ಉದ್ಯಾನವನದಲ್ಲಿಯೂ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದರು. ಸಾರ್ವಜನಿಕರನ್ನು ಆಕರ್ಷಿಸಲು ಹೆಲಿಕಾಪ್ಟರ್ ಸಂಚಾರ ಕೂಡ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ನರ್ವಾಡೆ ವಿನಾಯಕ್ ಕಾರ್ಬಾರಿ, ಮಂಗಳೂರು ಉಪ ವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಉಪ ಪೊಲೀಸ್ ಆಯುಕ್ತ  ಮಿಥುನ್ ಎಚ್.ಎನ್, ಉಪ ಅರಣ್ಯ ಸಂರಕ್ಷಣಾಧಿಕಾರಿ        ಆ್ಯಂಟೋನಿ  ಮರಿಯಪ್ಪ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.