ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ಗ್ಯಾರಂಟಿ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ,
ಗ್ಯಾರಂಟಿ ಅನುಷ್ಠಾನ ಸಮಿತಿ ಬಂಟ್ವಾಳ ವತಿಯಿಂದ ಪಂಚ ಗ್ಯಾರಂಟಿ ಕ್ಯಾಲೆಂಡರ್ 2026ರ ಬಿಡುಗಡೆ ಸಮಾರಂಭ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷರಾದ ಜಯಂತಿ ವಿ.ಪೂಜಾರಿ ವಹಿಸಿದ್ದರು. ಸಮಿತಿ ಸದಸ್ಯ ಕಾರ್ಯದರ್ಶಿ ಸಚಿನ್ ಕುಮಾರ್ ಸ್ವಾಗತಿ ಪ್ರಾಸ್ತಾವಿಕ ಮಾತನಾಡಿದರು.
ಈ ಸಂದರ್ಭ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ನಾರಾಯಣ ನಾಯ್ಕ್, ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್, ಪುರಸಭಾ ಅಧ್ಯಕ್ಷ ವಾಸು ಪೂಜಾರಿ ಲೊರೆಟ್ಟೊ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಅಬ್ಬಾಸ್ ಆಲಿ, ಚಂದ್ರಶೇಖರ್ ಭಂಡಾರಿ, ಬಾಲಕೃಷ್ಣ ಅಂಚನ್, ಸದಾಶಿವ ಬಂಗೇರ, ಪಂಚ ಗ್ಯಾರಂಟಿ ಇಲಾಖೆ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.


Be the first to comment on "ಬಂಟ್ವಾಳ ಗ್ಯಾರಂಟಿ ರಾಜ್ಯಕ್ಕೆ ಮಾದರಿ : ರಮಾನಾಥ ರೈ"