
ಬಂಟ್ವಾಳ: ಬಂಟ್ವಾಳ ತಾಲೂಕು ಎಲಿಯನಡುಗೋಡು ಮತ್ತು ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮದ ಗಡಿ ಭಾಗದಲ್ಲಿರುವ ಹೊಕ್ಕಾಡಿಗೋಳಿ ಮಹಿಷಮರ್ಧಿನಿ ಕಂಬಳ ಸಮಿತಿ ವತಿಯಿಂದ ಇತಿಹಾಸ ಪ್ರಸಿದ್ಧ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳವು ಹೊಕ್ಕಾಡಿಗೋಳಿಯಲ್ಲಿ ಡಿ.21ರಂದು ನಡೆಯಲಿದೆ.
ಅಂದು ಬೆಳಗ್ಗೆ ಶ್ರೀ ಕ್ಷೇತ್ರ ಪೂಂಜದ ಆಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಅವರು ಕಂಬಳ ಉದ್ಘಾಟಿಸಲಿರುವರು. ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ ಅವರು ಆಶೀರ್ವಚನ ನೀಡಲಿರುವರು. ಮೂಡುಬಿದಿರೆ ಚೌಟರ ಅರಮನೆ ಕುಲದೀಪ ಚೌಟ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು . ಪಡ್ಯಾರಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಧರ್ಮದರ್ಶ ಎ.ಜೀವಂದರ ಕುಮಾರ್ ಧ್ವಜಾರೋಹಣ ನೆರವೇರಿಸುವರು ಹಾಗೂ ಮತ್ತಿತರ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿರುವರು.
ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸಂಸದ ಕ್ಯಾ| ಬೃಜೇಶ್ ಚೌಟ ಅವರು ಅಧ್ಯಕ್ಷತೆ ವಹಿಸಲಿದ್ದು, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಅವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು, ಬೆಳ್ತಂಗಡಿ ಶಾಸಕ ಹರೀಶ ಪೂಂಜ, ಉದ್ಯಮಿ ಶಶಿಧರ ಶೆಟ್ಟಿ ಬರೋಡಾ,ಬಳ್ಕುಂಜೆ ಕಂಬಳ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ದುಬೈ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ, ಉದ್ಯಮಿ ಸಂಪತ್ ಶೆಟ್ಟಿ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ಉಮಾನಾಥ ಕೋಟ್ಯಾನ್, ಅಶೋಕ್ ಕುಮಾರ್ ರೈ, ಎಸ್.ಎಲ್ ಭೋಜೇ ಗೌಡ, ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಸಚಿವರಾದ ಬಿ.ರಮಾನಾಥ ರೈ, ಬಿ.ನಾಗರಾಜ ಶೆಟ್ಟಿ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್, ಮತ್ತಿತರ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿರುವರು. ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಸಂಗಬೆಟ್ಟು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ಅವರು ಅಧ್ಯಕ್ಷತೆ ವಹಿಸಲಿರುವರು. ಮತ್ತಿತರ ಗಣ್ಯರು ಭಾಗವಹಿಸಲಿರುವರು ಎಂದು ಕಂಬಳ ಸಮಿತಿ ಅಧ್ಯಕ್ಷ ನೋಣಾಲ್‌ಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ


Be the first to comment on "Hokkadigoli Kambala: ಹೊಕ್ಕಾಡಿಗೋಳಿ ಮಹಿಷಮರ್ಧಿನಿ ಕಂಬಳ ಸಮಿತಿ: ಡಿ.21ರಂದು ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ"