ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ವತಿಯಿಂದ ನಾಲ್ಯಪದವಿನಲ್ಲಿ ನಡೆದ ಜಿಲ್ಲಾಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳ ಆಶುಭಾಷಣ ಸ್ಪರ್ಧೆಯಲ್ಲಿ ಸಿದ್ಧಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನ ಸಹಶಿಕ್ಷಕ ಮಹೇಶ್ ಕುಮಾರ್ ವಿ ಕರ್ಕೇರ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ತರಬೇತಿ ನೀಡಿದ ವಿದ್ಯಾರ್ಥಿನಿ ಕಳೆದ ಮೂರು ವರ್ಷಗಳಲ್ಲಿ ಸತತ 4 ಬಾರಿ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿದ್ದು ಇದೀಗ ಭಾಷಣ ಸ್ಪರ್ಧೆಯಲ್ಲಿ ಗುರುಗಳೇ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದು ವಿಶೇಷ.