ಬಂಟ್ವಾಳ

ಸಜೀಪಮೂಡ: ಸರಕಾರಿ ಪಾಲಿಟೆಕ್ನಿಕ್ ರಾಷ್ಟ್ರೀಯ ಸೇವಾ ಯೋಜನಾ ವಿಶೇಷ ಶಿಬಿರ ಉದ್ಘಾಟನೆ

ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಸಜೀಪಮೂಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ನಡೆಯಿತು.

ಅಧ್ಯಕ್ಷತೆಯನ್ನು ಸರಕಾರಿ ಪಾಲಿಟೆಕ್ನಿಕ್ ಬಂಟ್ವಾಳದ ಪ್ರಿನ್ಸಿಪಾಲ್ ನರಸಿಂಹ ಭಟ್ ಎಚ್ ವಹಿಸಿದ್ದರು.

ಜಾಹೀರಾತು

ಸಜಿಪಮೂಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಶೆಟ್ಟಿ ನೆರವೇರಿಸಿ, ವಿದ್ಯಾರ್ಥಿಗಳನ್ನು ಸಮಾಜದಲ್ಲಿ ಉತ್ತಮ ಸ್ಥಾನಕ್ಕೆ ತಲುಪಿಸುವ ದಿಸೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ ನಿರಂತರವಾಗಿ ಶ್ರಮಿಸುತ್ತಿದೆ ಸೇವೆ ಮೂಲಕ ಶಿಸ್ತು, ನಾಯಕತ್ವ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳುವ ಅವಕಾಶವನ್ನು ಎನ್ಎಸ್ಎಸ್ ವಿದ್ಯಾರ್ಥಿಗಳಿಗೆ ನೀಡುತ್ತದೆ ಇಂಥ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸ ಸಾಧ್ಯವಾಗುತ್ತದೆ ಹಾಗೂ ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಿ ರೂಪುಗೊಳ್ಳಲು ನೆರವಾಗುತ್ತದೆ ಎಂದರು.

ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತ್ ಸದಸ್ಯರಾದ ವಿಶ್ವನಾಥ ಬೆಲ್ಚಡ,ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಜಯಪ್ರಕಾಶ್ ಪೆರ್ವ, ಪ್ರಿನ್ಸಿಪಾಲ್ ಡಾ. ಜೈರಾಬಿ, ವೈಸ್ ಪ್ರಿನ್ಸಿಪಾಲ್ ಜ್ಯೋತಿಕುಮಾರಿ ಉಪಸ್ಥಿತರಿದ್ದರು. ಯಾಂತ್ರಿಕ ವಿಭಾಗದ ವಿಭಾಗಾಧಿಕಾರಿ ಭಗವಾನ್ ಪ್ರಸಾದ್, ಕಾಮಗಾರಿ ವಿಭಾಗದ ವಿಭಾಗಾಧಿಕಾರಿ ಮೋಹನ್ ರಾಜ್ ಜಿ.ಎಸ್.ಕಂಪ್ಯೂಟರ್ ಸೈನ್ಸ್ ವಿಭಾಗದ ವಿಭಾಗಾಧಿಕಾರಿ ಭುವನೇಶ್ವರಿ, ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ವಿಭಾಗಾಧಿಕಾರಿ ಪ್ರವೀಣ್ ವಿ.ಡಿ. ಹಾಗೂ ಎನ್ ಎಸ್ ಎಸ್ ಘಟಕದ ನಾಯಕ ಸಿಂಚನ್  ಉಪಸ್ಥಿತರಿದ್ದರು.

ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಭಾಸ್ಕರ್ ಎಲ್ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು  ಜಯಂತ್ ವಂದಿಸಿ, ದೀಕ್ಷಿತ್ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…

21 hours ago