ಕಡೇಶಿವಾಲಯ ಗ್ರಾಮದ ಶೇರಾ ಎಂಬಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬ ಕಾರ್ಯಕ್ರಮ ನಡೆಯಿತು.
ಕಡೇಶಿವಾಲಯ ಕ್ಲಸ್ಟರ್ ಗೆ ಸಂಬಂಧಿಸಿದ ಶಾಲೆಗಳ ವಿದ್ಯಾರ್ಥಿಗಳು ಈ ಕಾರ್ಯ ಕ್ರಮದಲ್ಲಿ ಭಾಗವಹಿಸಿದ್ದರು.

ಕಡೇಶಿವಾಲಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಾರತಿ ಸುರೇಂದ್ರ ರಾವ್ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಬುನಾದಿ ಸಾಕ್ಷರತೆ ಮತ್ತು ಸಂಖ್ಯಾ ಜ್ಞಾನದ ಸಾಮರ್ಥ್ಯವನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಪಡೆದಾಗ ಕಲಿಕೆ ಪೂರ್ಣಗೊಳ್ಳಲು ಸಾಧ್ಯ, ಇದಕ್ಕಾಗಿ ಶಿಕ್ಷಕರು ಹಾಗೂ ಪೋಷಕರು ಶ್ರಮಿಸಬೇಕು ಎಂದರು.
ನಿವೃತ್ತ ಮುಖ್ಯ ಶಿಕ್ಷಕ ಬಾಬು ಗೌಡ ಕಲಿಕಾ ಹಬ್ಬ ಹೆಸರನ್ನು ಅನಾವರಣ ಗೊಳಿಸಿದರು. ಗ್ರಾಮ ಪಂಚಾಯತ್ ಸದಸ್ಯರಾದ ಸುರೇಶ್ ಬನಾರಿ, ಉದ್ಯಮಿ ಗಂಗಾಧರ ಶೇರಾ, ಎಸ್.ಡಿ.ಎಂ.ಸಿ. ಮಾಜಿ ಅಧ್ಯಕ್ಷ ಚೆನ್ನಪ್ಪ ಎಸ್ ಅಂಚನ್, ನಿವೃತ್ತ ಮುಖ್ಯ ಶಿಕ್ಷಕಿ ಕೋಮಲಾಂಗಿ, ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಸುಧಾಕರ್ ಭಟ್, ಕಡೇಶಿವಾಲಯ ಶಾಲೆ ಮುಖ್ಯ ಶಿಕ್ಷಕ ಬಾಬು ಪೂಜಾರಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಚಂದ್ರಶೇಖರ, ಹಿರಿಯ ವಿದ್ಯಾರ್ಥಿ ಸಂಘ ಅಧ್ಯಕ್ಷ ಚಿದಾನಂದ ಬೀರ ಕೋಡಿ , ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಉಷಾ ಉಪಸ್ಥಿತರಿದ್ದರು.
ಸಂಜೆ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ಬಹುಮಾನ ಮತ್ತು ಪ್ರಮಾಣ ಪತ್ರ ನೀಡಿ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಅನಿತಾ ಕುಮಾರಿ ಸ್ವಾಗತಿಸಿ,ಗೌರವ ಶಿಕ್ಷಕಿ ಸುರಕ್ಷಾ ವಂದಿಸಿದರು. ಸಹ ಶಿಕ್ಷಕಿ ಜೋಸ್ನಾ ಪ್ರಿಯಾ ವಾಸ್ ಕಾರ್ಯಕ್ರಮದ ನಿರೂಪಿಸಿದರು. ಹಿರಿಯ ಶಿಕ್ಷಕರಾದ ಶ್ರೀ ಗೋಪಾಲಗೌಡ, ಗೌರವ ಶಿಕ್ಷಕಿ ಸುಮಲತಾ ಹಾಗೂ ಗೌರವ ಶಿಕ್ಷಕಿ ಅಭಿಜ್ಞಾ ಸಹಕರಿಸಿದರು.


Be the first to comment on "ಶೇರಾ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬ"