ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿಯಿಂದ ಗುರುವಾರ ಪಕ್ಷ ಕಚೇರಿಯಲ್ಲಿ ನಡೆಯಿತು.
ಅಟಲ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸುವ ಮೂಲಕ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ ಚಾಲನೆ ನೀಡಿದರು. ಮಂಡಲದ ಅಧ್ಯಕ್ಷರಾದ ಆರ್. ಚೆನ್ನಪ್ಪ ಕೋಟ್ಯಾನ್ ಪ್ರಧಾನ ಕಾರ್ಯದರ್ಶಿಯಾದ ಸುದರ್ಶನ್ ಬಜ, ಪ್ರಮುಖರಾದ ವಿಕಾಸ್ ಪುತ್ತೂರು, ಸುಲೋಚನಾ ಜಿ.ಕೆ.ಭಟ್, ಡೊಂಬಯ್ಯ ಅರಳ, ಉಪಸ್ಥಿತರಿದ್ದರು. ಅಟಲ್ ಬಿಹಾರಿ ವಾಜಪೇಯಿ ಯವರ ಕುರಿತು ಸುಲೋಚನಾ ಜಿ.ಕೆ.ಭಟ್, ಮಾತನಾಡಿದರು. ಮಂಡಲದ ಪ್ರಧಾನ ಕಾರ್ಯದರ್ಶಿಯಾದ ಸುದರ್ಶನ್ ಬಜ ವಂದನಾರ್ಪಣೆ ಸಲ್ಲಿಸಿದರು.