ಜನವರಿ 4 ರವಿವಾರ 2026 ರಂದು ಬೆಳಿಗ್ಗೆ ಗಂಟೆ 8.30ರಿಂದ ಸಂಜೆ ಗಂಟೆ 5.30 ರ ತನಕ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ನಡೆಯಲಿರುವ ಯಕ್ಷಧ್ರುವ-ಯಕ್ಷಶಿಕ್ಷಣ ಯೋಜನೆಯ ವಿದ್ಯಾರ್ಥಿಗಳ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2025-26 ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸಹ್ಯಾದ್ರಿ ಕಾಲೇಜು ಆಡಳಿತ ನಿರ್ದೇಶಕ ದೇವದಾಸ್ ಹೆಗ್ಡೆಬಿಡುಗಡೆಗೊಳಿಸಿದರು.
ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ, ಪ್ರದಾನ ಕಾರ್ಯದರ್ಶಿ ಕೆ.ಪುರುಷೋತ್ತಮ ಭಂಡಾರಿ, ಯಕ್ಷ ಶಿಕ್ಷಣ ಯೋಜನೆಯ ಪ್ರಧಾನ ಸಂಚಾಲಕರಾದ ವಾಸುದೇವ ಐತಾಳ, ಸಂಯೋಜಕಾದ ದಿವಿತ್ ಕೋಟ್ಯಾನ್, ಸಲಹಾ ಸಮಿತಿ ಸದಸ್ಯರಾದಎಸ್. ಕೆ,ದಿವಕರ ಶೆಟ್ಟಿ, ದೇವದಾಸ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.