ಪ್ರಮುಖ ಸುದ್ದಿಗಳು

ಹೊಸ ವರ್ಷಾಚರಣೆ: ಮಂಗಳೂರು ಪೊಲೀಸ್ ಆಯುಕ್ತರು ಹೊರಡಿಸಿದ ಮಾರ್ಗಸೂಚಿ ಏನು?

2026ರ ಹೊಸ ವರ್ಷಾಚರಣೆಗೆ ಮಂಗಳೂರು ಸಜ್ಜಾಗುತ್ತಿದ್ದು, ಈ ಸಂದರ್ಭ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮಂಗಳೂರು ಪೊಲೀಸ್ ಆಯುಕ್ತರು ಪತ್ರಿಕಾ ಪ್ರಕಟಣೆ ಮೂಲಕ ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ.

  • 1) 2026 ರ ಹೊಸ ವರ್ಷಾಚರಣೆ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಯ ವತಿಯಿಂದ ಮಾರ್ಗ ಸೂಚಿಗಳನ್ನು ಹೊರಡಿಸಲಾಗಿದ್ದು, ಎಲ್ಲಾ ಕಾರ್ಯಕ್ರಮಗಳ ಆಯೋಜಕರು, ಸಾರ್ವಜನಿಕರು ನೀಡಲಾದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವುದು.
  • 2) ಅನುಮತಿ ಪಡೆಯದೇ ಸಾರ್ವಜನಿಕವಾಗಿ ಯಾವುದೇ ಆಚರಣೆಗಳನ್ನು ಮಾಡಲು ಅವಕಾಶ ಇರುವುದಿಲ್ಲ.
  • ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳು/ಕಿರುಕುಳ ಆಗದಂತೆ ಜವಾಬ್ದಾರಿತಯತವಾಗಿ ಸಂಭ್ರಮಾಚರಣೆ ನಡೆಸುವಂತೆ ಸೂಚಿಸಲಾಗಿದೆ.
  • 3) ಸಂಭ್ರಮಾಚರಣೆ ಹೆಸರಿನಲ್ಲಿ ಅತೀವೇಗದ ಚಾಲನೆ, ವೀಲಿಂಗ್ ನಡೆಸುವುದು, ಅಸಭ್ಯವರ್ತನೆಯಂತಹ ಸಾರ್ವಜನಿಕ ಕಿರುಕುಳದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು.
  • 4) ನಗರದಾದ್ಯಂತ ಬಂದೋಬಸ್ತ್‍ ಕರ್ತವ್ಯದ ಬಗ್ಗೆ ಪಿಸಿಆರ್ ವಾಹನಗಳು, ಹೈವೇ ಪೆಟ್ರೋಲ್ ವಾಹನಗಳು, ಪಿಕೆಟಿಂಗ್ ಪಾಯಿಂಟ್, ಚೆಕ್‍ ಪೋಸ್ಟ್‍ ಮತ್ತು ರೌಂಡ್ಸ್ ಕರ್ತವ್ಯಕ್ಕೆ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಹೆಚ್ಚುವರಿಯಾಗಿ ಸೂಕ್ಷ್ಮ ಸ್ಥಳಗಳಲ್ಲಿ ಕೆ.ಎಸ್‍.ಆರ್‍.ಪಿ. ತುಕಡಿಗಳು, ಎಫ್‍.ಎ.ಎಫ್ ತುಕಡಿ ಹಾಗೂ ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ.ಸಾರ್ವಜನಿಕರು ಯಾವುದೇ ದೂರುಗಳಿಗೆ 112 ಸಂಖ್ಯೆಗೆ ಕರೆ ಮಾಡುವುದು. 112 ಸಂಖ್ಯೆಯು ಕರೆಗೆ ಲಭ್ಯವಾಗದೇ ಇದ್ದಲ್ಲಿ ಮಂಗಳೂರು ನಗರ ಪೊಲೀಸ್ ನಿಯಂತ್ರಣ ಕೊಠಡಿ ಸಂಖ್ಯೆ 0824-2220800 ಅಥವಾ 9480802321 ಗೆ ಕರೆ ಮಾಡಬಹುದಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.