ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 1300ಕ್ಕೂ ಅಧಿಕ ಸದಸ್ಯರಿರುವ ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ನ ದಕ್ಷಿಣ ಕನ್ನಡ ಜಿಲ್ಲೆಯ 3ನೇ ವರ್ಷದ ಚಾಲಕರ ಸಮಾವೇಶ ಬಂಟ್ವಾಳದ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕಲ್ಯಾನ ಮಂಟಪದಲ್ಲಿ ಜ.4ರಂದು ನಡೆಯಲಿದೆ.
ಈ ವಿಷಯವನ್ನು ಮಂಗಳೂರು ನಗರಾಧ್ಯಕ್ಷ ನಾಗೇಶ್ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕಾರ್ಯಕ್ರಮಕ್ಕೆ ಸ್ಪೀಕರ್ ಯು.ಟಿ.ಖಾದರ್, ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಅಶೋಕ್ ಕುಮಾರ್ ರೈ, ಮಾಜಿ ಸಚಿವ ಬಿ.ರಮಾನಾಥ ರೈ ಸಹಿತ ಹಲವು ಗಣ್ಯರು ಆಗಮಿಸಲಿದ್ದಾರೆ. ಅಧ್ಯಕ್ಷತೆಯನ್ನು ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ಗೌರವಾಧ್ಯಕ್ಷ ಸಾಜಿದ್ ಐ.ಜಿ. ಸುಳ್ಯ ವಹಿಸಲಿದ್ದು, ಜಿಲ್ಲಾಧ್ಯಕ್ಷ ರಾಜೇಶ್ ಬರೆ ಉದ್ಘಾಟಿಸುವರು. ಈ ವೇಳೆ ಸಮಾಜಸೇವಕ ಈಶ್ವರ ಮಲ್ಪೆ ಹಿರಿಯ ಚಾಲಕರು, ಆಶಾ ಕಾರ್ಯಕರ್ತೆಯರು, ರಾಂಕ್ ವಿಜೇತರು, ಜಿಲ್ಲಾ ಪದಾಧಿಕಾರಿಗಳ ಸಹಿತ ಸಾಧಕರಿಗೆ ಸನ್ಮಾನ, ಆಂಬುಲೆನ್ಸ್ ಲೋಕಾರ್ಪಣೆ, ಉಚಿತ ಆರೋಗ್ಯ ತಪಾಸಣೆ ನಡೆಯಲಿದೆ ಎಂದರು.
ಜಿಲ್ಲೆ ಪ್ರಧಾನ ಕಾರ್ಯದರ್ಶಿ ಶಮೀರ್ ಪರ್ಲಿಯಾ, ಜಿಲ್ಲೆ ಸಂಘಟನಾ ಕಾರ್ಯದರ್ಶಿ ಮಹಮ್ಮದ್ ಅಲ್ತಫ್, ಜಿಲ್ಲೆ ಕೋಶಾಧಿಕಾರಿ ರಹೀಂ, ತಾಲೂಕು ಉಪಾಧ್ಯಕ್ಷ ಗಣೇಶ್ ಪಿಐ, ಮಂಗಳೂರು ತಾಲೂಕು ಪ್ರ.ಕಾರ್ಯದರ್ಶಿ ಹುಸೇನ್ ಸಾಬ್, ಬಂಟ್ವಾಳ ತಾಲೂಕು ಅಧ್ಯಕ್ಷ ಇಬ್ರಾಹಿಂ ಕಾಸಿಂ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು..