ವಿಟ್ಲ: ಬಂಟ್ವಾಳ ತಾಲೂಕಿನ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ನಡೆಯಲಿದ್ದು, ಇದಕ್ಕೆ ಸಂಭಂಧಿಸಿದಂತೆ ಸಂಪರ್ಕ ರಸ್ತೆ, ವಿವಿಧ ಸೌಕರ್ಯಗಳ ಕಾಮಗಾರಿಗೆ ಚಾಲನೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಭಾನುವಾರ ಜ.11ರಂದು ಪದ್ಯಾಣದಲ್ಲಿ ನಡೆಯಲಿದೆ.
ಬೆಳಗ್ಗೆ 9.30ರಿಂದ ಕಾರ್ಯಕ್ರಮಗಳು ನಡೆಯಲಿದ್ದು, ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹಾಗೂ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಈ ವೇಳೆ ಬ್ರಹ್ಮಕಲಶೋತ್ಸವ, ಜೀರ್ಣೋದ್ಧಾರ ಸಮಿತಿ ಹಾಗೂ ದೇವಸ್ಥಾನದ ಆಡಳಿತ ಸಮಿತಿ ಸದಸ್ಯರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
(more…)