
ಬಂಟ್ವಾಳ: ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ೨೦೨೬-೨೮ನೇ ಸಾಲಿನ ನೂತನ ಅಧ್ಯಕ್ಷ ಪ್ರಶಾಂತ್ ಪೂಂಜಾಲಕಟ್ಟೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸೋಮವಾರ ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ, ಜಿಲ್ಲೆಯ ಪತ್ರಕರ್ತರ ಸಂಘವು ಗ್ರಾಮವಾಸ್ತವ್ಯದಂತಹ ಸಮಾಜಮುಖಿ ಕಾರ್ಯಗಳ ಮೂಲಕ ವಿಶೇಷ ಹೆಸರನ್ನು ಗಳಿಸಿಕೊಂಡಿದ್ದು, ಹಲವು ಸವಾಲುಗಳ ಮಧ್ಯೆ ಎಲ್ಲಾ ಪತ್ರಕರ್ತರ ಸಹಕಾರದೊಂದಿಗೆ ಸಂಘ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಪ್ರಶಾಂತ್ ಪೂಂಜಾಲಕಟ್ಟೆ ನೇತೃತ್ವದ ಬಂಟ್ವಾಳದ ಸಂಘವು ಯಶಸ್ವಿಯಾಗಿ ಮುನ್ನಡೆಯುತ್ತಿದೆ ಎಂದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಜಾಪ್ರಭುತ್ವ ರಾಷ್ಟ್ರವು ಸಮರ್ಥವಾಗಿ ಮುಂದುವರಿಯಲು ಮಾಧ್ಯಮದ ಪಾತ್ರ ಅತ್ಯಮೂಲ್ಯವಾಗಿದ್ದು, ಹೀಗಾಗಿ ಮಾಧ್ಯಮಕ್ಕೆ ತನ್ನದೇ ಆದ ಸ್ವಾತಂತ್ರ‍್ಯ ಇರುವುದು ಅತಿ ಅಗತ್ಯವಾಗಿದೆ. ಪತ್ರಕರ್ತರು ತಮ್ಮದೇ ಆದ ಬದ್ಧತೆಯೊಂದಿಗೆ ಜವಾಬ್ದಾರಿ ನಿರ್ವಹಿಸುವ ಜತೆಗೆ ಸಂಘಟನೆಯಲ್ಲೂ ನಿಷ್ಠೆಯಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಬಂಟ್ವಾಳದ ನೂತನ ತಂಡವು ತಾಲೂಕಿನ ಪತ್ರಕರ್ತರನ್ನು ಒಗ್ಗೂಡಿಕೊಂಡು ಮುಂದುವರಿಯಬೇಕಿದೆ ಎಂದರು.
ಬಂಟ್ವಾಳ ತಹಶೀಲ್ದಾರ್ ಮಂಜುನಾಥ್ ಸಿ. ಮಾತನಾಡಿ, ಜನರಿಗೆ ಸತ್ಯ ವಿಚಾರಗಳನ್ನು ತಲುಪಿಸುವ ಕಾರ್ಯವನ್ನು ಪತ್ರಕರ್ತರು ಪ್ರಾಮಾಣಿಕ ರೀತಿಯಲ್ಲಿ ನಿರ್ವಹಿಸುತ್ತಿದ್ದು, ಪತ್ರಿಕೆಗೆ ಸುದ್ದಿ ಬರೆಯುವುದರಿಂದ ಹಿಡಿದು ಮನೆ ಬಾಗಿಲಿಗೆ ಪತ್ರಿಕೆ ತಲುಪುವವರೆಗೂ ಹಲವು ಸವಾಲುಗಳಿದ್ದರೂ ಅದನ್ನು ಆಯಾಯ ಪತ್ರಿಕೆಗಳ ತಂಡ ಬಹಳ ಯಶಸ್ವಿಯಾಗಿ ನಿರ್ವಹಿಸುತ್ತಿದೆ ಎಂದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ.ಪೂಜಾರಿ, ಕಾರ್ಯಕಾರಿ ಸಮಿತಿ ಸದಸ್ಯ ಸಂದೀಪ್ ಸಾಲ್ಯಾನ್ ಮುಖ್ಯಅತಿಥಿಗಳಾಗಿ ಭಾಗವಹಿಸಿದ್ದರು. ಅಧ್ಯಕ್ಷ ಪ್ರಶಾಂತ್ ಪೂಂಜಾಲಕಟ್ಟೆಯವರ ಜತೆಗೆ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಆಲಿ ವಿಟ್ಲ, ಕೋಶಾಧಿಕಾರಿ ಚಂದ್ರಶೇಖರ ಕಲ್ಮಲೆ, ಉಪಾಧ್ಯಕ್ಷ ವಿಷ್ಣುಗುಪ್ತ ಪುಣಚ, ಜತೆ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ತಲಪಾಡಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ವೆಂಕಟೇಶ್ ಬಂಟ್ವಾಳ, ರತ್ನದೇವ್ ಪುಂಜಾಲಕಟ್ಟೆ, ಉದಯಶಂಕರ ನೀರ್ಪಾಜೆ, ವಾಮನ ಪೂಜಾರಿ
ಪೊಳಲಿ ಹಾಗೂ ಮೌನೇಶ್ ವಿಶ್ವಕರ್ಮ ಅವರು ಅಧಿಕಾರ ವಹಿಸಿಕೊಂಡರು. ಕಿರಣ್ ಸರಪಾಡಿ ಸ್ವಾಗತಿಸಿ, ಮಹಮ್ಮದ್ ಆಲಿ ವಂದಿಸಿದರು.
ಮೌನೇಶ್ ವಿಶ್ವಕರ್ಮ ಕಾರ್ಯಕ್ರಮ ನಿರೂಪಿಸಿದರು


Be the first to comment on "ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ೨೦೨೬-೨೮ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ"