ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬಂಟ್ವಾಳ ತಾಲೂಕು ವ್ಯಾಪ್ತಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಸ್ವಸಹಾಯ ಸಂಘಗಳಿಗೆ 1001 ಹೊಸ ಸದಸ್ಯರ ಸೇರ್ಪಡೆ ಒಂದೇ ವರ್ಷದಲ್ಲಾಗಿದೆ.
ಬಂಟ್ವಾಳ ತಾಲೂಕಿನ ನಾವೂರ ಗ್ರಾಮದ ಅನ್ನಪೂರ್ಣೇಶ್ವರಿ ಸಂಘಕ್ಕೆ ಹೊಸ ಸದಸ್ಯರಾಗಿ ಚೇತನ ಅವರು ಸಾವಿರದ ಒಂದನೇ ಸದಸ್ಯರಾಗಿ ಸೇರ್ಪಡೆಯಾಗಿದ್ದು ಇವರಿಗೆ ದಾಖಲಾತಿಯನ್ನು ಹತ್ತಾಂತರಿಸುವ ಕಾರ್ಯಕ್ರಮ ಬಂಟ್ವಾಳದಲ್ಲಿರುವ ಬಂಟ್ವಾಳ ತಾಲೂಕು ಯೋಜನಾ ಕಚೇರಿಯಲ್ಲಿ ನಡೆಯಿತು.
ಉಡುಪಿ ಪ್ರಾದೇಶಿಕ ವ್ಯಾಪ್ತಿಯ ನಿರ್ದೇಶಕ ಆನಂದ ಸುವರ್ಣ ಉದ್ಘಾಟಿಸಿ ಚಾಲನೆ ನೀಡಿದರು. ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ, ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪೂಜಾರಿ, ಕೇಂದ್ರ ಒಕ್ಕೂಟ ಅಧ್ಯಕ್ಷ ಚಿದಾನಂದ ರೈ, ಕೇಂದ್ರ ಒಕ್ಕೂಟ ಮಾಜಿ ಅಧ್ಯಕ್ಷರಾದ ಸದಾನಂದ ನಾವೂರು, ಕೃಷ್ಣಪ್ಪ ಪೂಜಾರಿ, ಮಾಧವ ವಳವೂರು, ಎಲ್ಲ 68 ಒಕ್ಕೂಟಗಳ ಅಧ್ಯಕ್ಷರು, ವಲಯಾಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.