ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಬಿಲ್ಲವ ಮಹಿಳಾ ಸಮಿತಿ, ಹಾಗೂ ಯುವವಾಹಿನಿ ಬಂಟ್ವಾಳ ಘಟಕದ ಸಹಕಾರದೊಂದಿಗೆ ಬಂಟ್ವಾಳ ಭಂಡಾರಿಬೆಟ್ಟು ಎಸ್.ವಿ.ಎಸ್ ಶಾಲಾ ಮೈದಾನದಲ್ಲಿ 2026 ನೇ ಸಾಲಿನ ಕೋಟಿ ಚೆನ್ನಯ ಕ್ರೀಡೋತ್ಸವ ಜನವರಿ 25ರಂದು ನಡೆಯಲಿದೆ.
ಈ ವಿಷಯವನ್ನು ಕ್ರೀಡೋತ್ಸವ ಸಮಿತಿ ಸಂಚಾಲಕ ಬೇಬಿ ಕುಂದರ್ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಜ್ಯೋತಿ ಬೆಳಗಿಸಿ ಕ್ತೀಡಾಕೂಟಕ್ಕೆ ಶುಭಾಶೀರ್ವಾದ ನೀಡುವರು. ಈ ಬಾರಿ ಕಬಡ್ಡಿಯನ್ನು ಪ್ರೊ ಕಬಡ್ಡಿ ಮಾದರಿಯಲ್ಲಿ ನಡೆಯಲಿದೆ ಎಂದರು. ಈ ಬಾರಿ 27 ತಂಡಗಳು ಭಾಗವಹಿಸಲಿವೆ. ಕಳೆದ ಬಾರಿ 24 ತಂಡಗಳಿದ್ದವು ಎಂದರು.
ಪುರುಷರ ವಿಭಾಗದಲ್ಲಿ ಕಬಡ್ಡಿ , ಹಗ್ಗಜಗ್ಗಾಟ ವಾಲಿಬಾಲ್ ಮಹಿಳೆಯರ ವಿಭಾಗದಲ್ಲಿ ತ್ರೋಬಾಲ್, ಹಗ್ಗಜಗ್ಗಾಟ ಗುಂಪು ಸ್ಪರ್ಧೆಗಳು ಮತ್ತು ವಿವಿಧ ವಿಭಾಗದಲ್ಲಿ 50 ಮೀ,100 ಮೀ, 200 ಮೀ, ರಿಲೇ, ಗುಂಡೆಸೆತ, ಉದ್ದಜಿಗಿತ, ನಡಿಗೆ ಹಾಗೂ ಲಕ್ಕೀಗೇಮ್ ಸ್ಪರ್ಧೆಗಳು ನಡೆಯಲಿದೆ ಎಂದರು.
ಬೆಳಗ್ಗೆ ಗಂಟೆ 9.30 ರಿಂದ ಸಂಜೆ ಗಂಟೆ 6.00 ರ ವರೆಗೆ ಬಂಟ್ವಾಳ ತಾಲೂಕಿನ ವಿವಿಧ ಬಿಲ್ಲವ ಸಂಘಗಳ ನಡುವೆ ತೀವ್ರ ಪೈಪೋಟಿಯ ಸ್ಪರ್ಧೆಗಳು ನಡೆಯಲಿದೆ ಎಂದರು.
ಉದ್ಘಾಟನಾ ಸಮಾರಂಭ :
ಭಾರತ ಸರಕಾರದ ಮಾಜಿ ವಿತ್ತ ಸಚಿವರಾದ ಬಿ. ಜನಾರ್ದನ ಪೂಜಾರಿ ಸಮಾರಂಭ ಉದ್ಘಾಟಿಸಲಿದ್ದಾರೆ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ವಿಧಾನ ಪರಿಷತ್ ಶಾಸಕರಾದ ಬಿ.ಕೆ ಹರಿಪ್ರಸಾದ್, ಹಾಗೂ ಬಂಟ್ವಾಳ ಡಿವೈಎಸ್.ಪಿ ವಿಜಯ ಪ್ರಸಾದ್ ಗೌರವ ರಕ್ಷೆ ಸ್ವೀಕರಿಸಲಿದ್ದಾರೆ, ಗುರುಧರ್ಮ ಪ್ರಚಾರಸಭಾ, ಕರ್ನಾಟಕ ಯೋಜನಾ ಘಟಕದ ಸಂಚಾಲಕರಾದ ಗೋಪಿ ಕೃಷ್ಣಪ್ಪ ಕ್ರೀಡಾ ಜ್ಯೋತಿ ಹಸ್ತಾಂತರ ಮಾಡಲಿದ್ದಾರೆ, ನಂದಗುಡಿ-ಬೆಂಗಳೂರು ಗ್ರಾಮಾಂತರ ಇನ್‌ಸ್ಪೆಕ್ಟರ್ ಆಫ್ ಪೊಲೀಸ್ ಶಾಂತರಾಮ್ ಕುಂದರ್ ಧ್ವಜಾರೋಹಣ ಮಾಡಲಿದ್ದಾರೆ ಎಂದರು.
ಪಡುಮಲೆ ಕೋಟಿಚೆನ್ನಯ ಜನ್ಮಸ್ಥಾನ, ಸಂಚಲನಾ ಸಮಿತಿ, ಅಧ್ಯಕ್ಷರಾದ ಕೆ. ಹರಿಕೃಷ್ಣ ಬಂಟ್ವಾಳ್, ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಂಜುನಾಥ ಪೂಜಾರಿ, ಹಾಗೂ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಸೂರ್ಯಕಾಂತ್ ಜೆ ಸುವರ್ಣ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
ಮಾಜಿ ಶಾಸಕರಾದ ಎ ರುಕ್ಮಯ ಪೂಜಾರಿ, ನವದೆಹಲಿ,ಆನ್ ರೋಕ್ ಪ್ರೈ.ಲಿ, ವೈಸ್ ಚೆಯರ್ ಮೆನ್, ಸಂತೋಷ್ ಜೆ. ಪೂಜಾರಿ, ಉದ್ಯಮಿ ಪ್ರಕಾಶ್ ಅಂಚನ್, ಡೆಪ್ಯೂಟಿ ಸುಪರಿಂಟೆಂಡೆಂಟ್ ಆಫ್ ಎಕ್ಸೆಸ್ ಗಾಯತ್ರಿ ಎಂ. ಶಿವಕುಮಾರ್, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಬಿಜೆಪಿ ದ.ಕ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಉಡುಪಿ ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿ ಅಧ್ಯಕ್ಷರಾದ ಬಿ. ಎನ್. ಶಂಕರ ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಡು, ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ. ಸುವರ್ಣ , ಉದ್ಯಮಿ ಸದಾನಂದ ಪೂಜಾರಿ ಪುಣೆ, ನಮ್ಮ ಕುಡ್ಲ ಆಡಳಿತ ನಿರ್ದೇಶಕರು ಲೀಲಾಕ್ಷ ಬಿ. ಕರ್ಕೇರಾ, ಮೆಸ್ಕಾಂ ಇಂಜಿನಿಯರ್ ನಿತೇಶ್, ಬಿಲ್ಲವ ಬ್ರಿಗೇಡ್ ಸಂಸ್ಥಾಪಕರು ಸದಾನಂದ ಪೂಜಾರಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ
ಸಮಾರೋಪ ಸಮಾರಂಭ :
ಕೋಟಿ ಚೆನ್ನಯ ಕ್ರೀಡಾಕೂಟದ ಸಂಚಾಲಕರಾದ ಬೇಬಿ ಕುಂದರ್ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಉಡುಪಿ-ಚಿಕ್ಕಮಗಳೂರು ಸಂಸದರು, ಕೋಟ ಶ್ರೀನಿವಾಸ ಪೂಜಾರಿ, ಮುಲ್ಕಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರ ಶಾಸಕರು, ಉಮಾನಾಥ ಕೋಟ್ಯಾನ್, ಮಂಗಳೂರು ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷರು, ಹರೀಶ್ ಕುಮಾರ್, ಬಹುಮಾನ ವಿತರಿಸಲಿದ್ದಾರೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾದ ಪ್ರತಿಭಾ ಕುಳಾಯಿ, ಉದ್ಯಮಿ ವಿಜಯ ಪೂಜಾರಿ ಕುಂದಾಪುರ, ಮುಖ್ಯಮಂತ್ರಿಗಳ ಮಾಜಿ ಆಪ್ತ ಸಹಾಯಕರಾದ ಜಗನ್ನಾಥ್ ಬಂಗೇರ ನಿರ್ಮಲ್, ಬಿಲ್ಲವ ಸಂಘ ಹುಬ್ಬಳ್ಳಿ-ಧಾರವಾಡ ಅಧ್ಯಕ್ಷರಾದ ವಿವೇಕಾನಂದ ಪೂಜಾರಿ , ಶ್ರೀ ನಾರಾಯಣ ಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷರಾದ ಸತ್ಯಜಿತ್ ಸುರತ್ಕಲ್, ಬಿರುವೆರ್ ಕುಡ್ಲ ಸಂಸ್ಥಾಪಕರಾದ ಉದಯ ಪೂಜಾರಿ, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಮ್, ಉದ್ಯಮಿಗಳಾದ ಪ್ರಶಾಂತ್ ಸನಿಲ್, ಮನೋಜ್ ಸರಿಪಲ್ಲ, ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರ, ಅಧ್ಯಕ್ಷರಾದ, ಚಿತ್ತರಂಜನ್, ಸೂರತ್ ಬಿಲ್ಲವ ಸಂಘ ಅಧ್ಯಕ್ಷರಾದ ವಿಶ್ವನಾಥ ಪೂಜಾರಿ, ಉದ್ಯಮಿಗಳಾದ
ಸುರೇಶ್ ಕರ್ಕೇರಾ, ಲೋಕೇಶ್ ಸುವರ್ಣ ಕಲ್ಲಡ್ಕ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು.
ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಕ್ರೀಡಾಕೂಟ ಯಶಸ್ಸಿಗೆ ಸಹಕಾರ ಕೋರಿದರು.
ಕ್ರೀಡೋತ್ಸವ ಸಮಿತಿ ಕಾರ್ಯದರ್ಶಿ ದಿನೇಶ್ ಸುವರ್ಣ ರಾಯಿ, ಕೋಶಾಧಿಕಾರಿ ಸುಂದರ ಪೂಜಾರಿ ಬೊಳಂಗಡಿ, ಜತೆ ಕಾರ್ಯದರ್ಶಿ ಹರೀಶ್ ಕೋಟ್ಯಾನ್ ಕುದನೆ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಉಪಾಧ್ಯಕ್ಷ ಜಯಪ್ರಕಾಶ್ ಜೆ ಎಸ್, ಕೋಶಾಧಿಕಾರಿ ಸುನೀಲ್ ಕುಂದರ್, ಜತೆ ಕಾರ್ಯದರ್ಶಿ ಆನಂದ ಸಾಲ್ಯಾನ್, ಆಂತರಿಕ ಲೆಕ್ಕ ಪರಿಶೋಧಕ ಪ್ರಶಾಂತ್ ಕೋಟ್ಯಾನ್ ಉಪಸ್ಥಿತರಿದ್ದರು.
ಬಂಟ್ವಾಳದ ಹಲವೆಡೆ ಸಂಸಾರ ಜೋಡುಮಾರ್ಗ ತಂಡದಿಂದ ಕಾರ್ಯಕ್ರಮ, ಸಾರ್ವಜನಿಕರಿಗೆ ಮಾಹಿತಿ (more…)