
ನರಿಕೊಂಬು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಗ್ರಾಮಸಭೆ ನಡೆಯಿತು. ಪ್ರಾಥಮಿಕ ಶಾಲಾ ವಿದ್ಯಾರ್ಥಿ ಯದ್ವಿತ್ ಅಧ್ಯಕ್ಷತೆ ವಹಿಸಿದ್ದರು. ಬೊಂಡಾಲ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಪ್ರೇಕ್ಷಾ ಉದ್ಘಾಟಿಸಿದರು.
ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳ ಬೇಡಿಕೆಗಳನ್ನು ಆಲಿಸಿ ಪರಿಹಾರದ ಭರವಸೆ ನೀಡಿದರು.
ಅಂಗನವಾಡಿಯ ಮೇಲ್ವಿಚಾರಕಿ ನೀತಾ ಮಕ್ಕಳ ಗ್ರಾಮಸಭೆ ಮಹತ್ವದ ಬಗ್ಗೆ ಮಾತುಗಳನ್ನಾಡಿದರು ನರಿಕೊಂಬು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಅಂಚನ್ ಶುಭ ಹಾರೈಸಿದರು ಪಂಚಾಯತ್ ಸದಸ್ಯರಾದ ಕಿಶೋರ್ ಶೆಟ್ಟಿ, ಪ್ರಕಾಶ್ ಮಡಿಮುಗೇರ್, ರಂಜಿತ್, ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಗೋಪಾಲ್, ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದವರು ಭಾಗವಹಿಸಿದ್ದರು.
ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿತ್ತು. ನಾಯಿಲ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಬಹುಮಾನ ಹಾಗೂ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಪ್ರೌಢಶಾಲಾ ವಿದ್ಯಾರ್ಥಿಗಳು ದ್ವಿತೀಯ ಬಹುಮಾನ ಪಡೆದರು
ಪ್ರೌಢಶಾಲಾ ವಿದ್ಯಾರ್ಥಿನಿ ಗ್ಲೇನಿಶಾ ಸರಲ್ ವಾಸ್ ಸ್ವಾಗತಿಸಿದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಕೃಷ್ಣ ನಾಯ್ಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು ಪಂಚಾಯತ್ ಕಾರ್ಯದರ್ಶಿ ಅಶ್ರಫ್ ಕಾರ್ಯಕ್ರಮ ನಿರೂಪಿಸಿದರು ನರಿಕೊಂಬು ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿ ಎಸ್.ಎಂ.ಮೌಲ್ಯ ವಂದಿಸಿದರು.


Be the first to comment on "ನರಿಕೊಂಬು ಗ್ರಾಮ: ಮಕ್ಕಳ ಗ್ರಾಮಸಭೆ"