ಬಂಟ್ವಾಳ: ಚುನಾವಣಾ ಆಯೋಗದ ಆದೇಶದಂತೆ ಮತದಾರರ ದಿನಾಚರಣೆ ಪ್ರಯುಕ್ತ ಬಂಟ್ವಾಳ ತಾಲೂಕು ಆಡಳಿತಸೌಧದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ತಹಸೀಲ್ದಾರ್ ಜಿ. ಮಂಜುನಾಥ್ ಮಾತನಾಡಿ, ಭಾರತದ ಪೌರರಾದ ನಾವೆಲ್ಲರೂ ಮತದಾನದ ಮಹತ್ವವನ್ನು ಅರಿತು ಜವಾಬ್ದಾರಿಯುತ ಪ್ರಜೆಗಳಾಗಿ ಮತ ಚಲಾಯಿಸಬೇಕು. ಸಂವಿಧಾನದ ಮೌಲ್ಯಗಳನ್ನು ಕಾಪಾಡಲು ಬದ್ಧರಾಗಿರಬೇಕು ಎಂದು ಹೇಳಿದರು.
ಚುನಾವಣಾ ಉಪತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಮ್ತಾಜ್, ಕೇಂದ್ರ ಸ್ಥಾನಿಯ ಉಪತಹಸೀಲ್ದಾರ್ ನರೇಂದ್ರನಾಥ್ ಮಿತ್ತೂರು, ಉಪತಹಸೀಲ್ದಾರ್ ದಿವಾಕರ ಮುಗುಳಿಯ, ಚುನಾವಣಾ ಸಿಬ್ಬಂದಿ ಕಿರಣ್ ಕುಮಾರ್, ತಾಲೂಕು ಕಚೇರಿ ಸಿಬ್ಬಂದಿ, ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು, ಸಾರ್ವಜನಿಕರು ಉಪಸ್ಥಿತರಿದ್ದರು
ಬಂಟ್ವಾಳದ ಹಲವೆಡೆ ಸಂಸಾರ ಜೋಡುಮಾರ್ಗ ತಂಡದಿಂದ ಕಾರ್ಯಕ್ರಮ, ಸಾರ್ವಜನಿಕರಿಗೆ ಮಾಹಿತಿ (more…)