ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು, ವಿಟ್ಲ ಘಟಕದ ವತಿಯಿಂದ ಮಂಚಿ ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿರುವ ಯಕ್ಷದ್ರುವ ಯಕ್ಷ ಶಿಕ್ಷಣ ಯಕ್ಷಗಾನ ಅಭ್ಯಾಸ ತರಗತಿಯ ಸಮಾರೋಪ ಶಾಲಾ ಸಭಾಂಗಣದಲ್ಲಿ ಜರುಗಿತು.
ಅತಿಥಿಗಳಾಗಿ ಭಾಗವಹಿಸಿದ ವಿಟ್ಲ ಘಟಕದ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಮಾತನಾಡಿ, ಅವಕಾಶ ವಂಚಿತ ಸರಕಾರಿ ಶಾಲೆಯ ಮಕ್ಕಳಿಗಾಗಿ ಹಮ್ಮಿಕೊಳ್ಳಲಾಗಿರುವ ಯಕ್ಷದ್ರುವ ಯಕ್ಷ ಶಿಕ್ಷಣವು ಯಕ್ಷಗಾನದ ಅರಿವಿನ ಜೊತೆಗೆ ಸಂಸ್ಕಾರಭರಿತ ಜೀವನ ಕಟ್ಟಿಕೊಡುವುದರಲ್ಲಿ ಸಂಶಯವಿಲ್ಲ. ಪುರಾಣದ ಜ್ಞಾನ ಬೆಳೆಸುವುದರ ಜೊತೆಗೆ ತನ್ನ ಬೌದ್ಧಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬಹುದು. ವೇದಿಕೆ ಮೇಲೆ ತನ್ನ ಪ್ರತಿಭೆಯನ್ನು ತೋರ್ಪಡಿಸುವ ಮಕ್ಕಳು ಮುಂದೆ ಸಮಾಜದಲ್ಲಿ ಕೊಡುಗೆಗಳಾಗಿ ಮೂಡಿ ಬರುತ್ತಾರೆ ಎಂದರು
ಪಟ್ಲ ಫೌಂಡೇಶನ್ ವಿಟ್ಲ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಪೂವಪ್ಪ ಶೆಟ್ಟಿ ಅಳಿಕೆ ಶುಭ ಹಾರೈಸಿದರು. ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಯಕ್ಷಗಾನ ಪಾತ್ರಧಾರಿ ವಿದ್ಯಾರ್ಥಿಗಳು ಅನಿಸಿಕೆ ವ್ಯಕ್ತಪಡಿಸಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಿವಶಂಕರ್ ರಾವ್ ಮಂಚಿ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.
ಕನ್ನಡ ಭಾಷಾ ಶಿಕ್ಷಕಿ ವಿಜಯಲಕ್ಷ್ಮಿ ಕಟೀಲು, ಯಕ್ಷಗಾನ ಗುರುಗಳಾದ ಅಶ್ವತ್ಥ್ ಮಂಜನಾಡಿ ವಿದ್ಯಾರ್ಥಿಗಳ ಯಕ್ಷಗಾನ ಕಲಿಕೆಯ ಪ್ರಗತಿಯನ್ನು ಪ್ರಶಂಸಿಸಿದರು. ಹಿಂದಿ ಭಾಷಾ ಶಿಕ್ಷಕಿ ಶಾಂತ, ಸಮಾಜ ವಿಜ್ಞಾನ ಶಿಕ್ಷಕರಾದ ಜಗನ್ನಾಥ ಪುರುಷ ಹಾಗೂ ಶಿಕ್ಷಕ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು. ಚಿತ್ರ ಕಲಾವಿದ ತಾರಾನಾಥ್ ಕೈರಂಗಳ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮ್ ಪ್ರಸಾದ್ ರೈ ತಿರುವಾಜೆ ವಂದಿಸಿದರು
ಬಂಟ್ವಾಳದ ಹಲವೆಡೆ ಸಂಸಾರ ಜೋಡುಮಾರ್ಗ ತಂಡದಿಂದ ಕಾರ್ಯಕ್ರಮ, ಸಾರ್ವಜನಿಕರಿಗೆ ಮಾಹಿತಿ (more…)