ಧರ್ಮ, ಸತ್ಯ, ಮಾನವೀಯತೆಯ ಗುಣಗಳಿಂದ ಬದುಕಿದ ಜನರನ್ನು ಪೂಜನೀಯ ಭಾವನೆಯಲ್ಲಿ ಕಾಣುವ ಸಂಸ್ಕೃತಿ ನಮ್ಮದು ಎಂದು ಶ್ರೀ ನಾರಾಯಣಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದರು.
ಬಂಟ್ವಾಳ ತಾಲೂಕಿನ ಅಮ್ಟೂರು ಗ್ರಾಮದ ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯ ಕಟ್ಟೆಮಾರ್ ನಲ್ಲಿ ಶ್ರೀಮಂತ್ರ ದೇವತೆ, ಸ್ವಾಮಿ ಕೊರಗಜ್ಜ, ಮತ್ತು ಶ್ರೀ ಗುಳಿಗ ದೈವಗಳ ವಾರ್ಷಿಕ ಕೋಲೋತ್ಸವ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭ ಸಮಾಜದಲ್ಲಿ ಸಾಧನೆ ಮಾಡಿದ ವಿವಿಧ ಗಣ್ಯರನ್ನು ಹಾಗೂ ಸಮಾಜ ಸೇವಕರನ್ನು ಗುರುತಿಸಿ ಗೌರವಿಸಲಾಯಿತು. ವಿಶೇಷ ಸಾಧನೆ ಮಾಡಿದ ಸ್ಥಳೀಯ ಮಕ್ಕಳನ್ನು ಅಭಿನಂದಿಸಲಾಯಿತು. ಅನಾರೋಗ್ಯ ಹಾಗೂ ಅಶಕ್ತರನ್ನು ಗುರುತಿಸಿ ತುರ್ತು ಆರೋಗ್ಯ ನಿಧಿಯನ್ನು ಕಟ್ಟೆಮಾರ್ ಟ್ರಸ್ಟ್ ವತಿಯಿಂದ ನೀಡಲಾಯಿತು.
ಅನಂತಾಡಿ ಗ್ರಾಮದ ಬೊಗ್ಗಂಡ ವಿಶ್ವನಾಥ ಪೂಜಾರಿ ಸುಭಾಷಿಣಿ ದಂಪತಿಗೆ ಕ್ಷೇತ್ರ ಸಾನಿಧ್ಯ ಹಾಗೂ ಇತರರ ಸಹಕಾರದಿಂದ ನಿರ್ಮಿಸಿಕೊಟ್ಟ ಮನೆಯ ಕೀ ಯನ್ನು, ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬಕ್ಕೆ ಗಣಕಯಂತ್ರ ( ಕಂಪ್ಯೂಟರ್ ) ಹಸ್ತಾಂತರ ಮಾಡಲಾಯಿತು.
ಸಭಾ ಕಾರ್ಯಕ್ರಮದ ಮೊದಲು ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನ ಕಾರ್ಯಕ್ರಮ, ಶ್ರೀ ಚಿಂತಾಮಣಿ ಡ್ಯಾನ್ಸ್ ಗ್ರೂಪ್ ಕಡೇಶಿವಾಲಯ ಅವರಿಂದ ಹನುಮಾನ್ ಫ್ರೆಂಡ್ಸ್ ಅಮ್ಟೂರು ಪ್ರಾಯೋಜಕತ್ವದಲ್ಲಿ ಭಕ್ತಿ ಪ್ರಧಾನ ಕಾರ್ಯಕ್ರಮ ಜರಗಿತು. ಬೆಳಿಗ್ಗೆ ಕ್ಷೇತ್ರದ ವತಿಯಿಂದ ನಿರ್ಮಾಣವಾದ ಮಹಾ ದ್ವಾರವನ್ನು ಉದ್ಘಾಟಿಸಲಾಯಿತು.
ತೆಲಂಗಾಣದ ಆಶ್ರಿತ್ ಕಿಶನ್, ಬೆಂಗಳೂರಿನ ವಕೀಲರಾದ ಚಂದ್ರಪ್ರಸಾದ್ ಕೆ ಆರ್, ಬಿಜೆಪಿ ರಾಜ್ಯ ಪರಿಷತ್ ಸದಸ್ಯ ರಾಜೇಶ್ ಎಲ್, ಕಡಬದ ಅಭಿಲಾಷ್, ಶ್ರೀ ಮಹಾ ಪ್ರತ್ಯಂಗಿರ ದೇವಿ ಜ್ಞಾನ ಪರಮೇಶ್ವರ ಸ್ವಾಮಿ ದೇವಸ್ಥಾನದ ಗೌರೀಶ್ ಬೆಂಗಳೂರು, ಸಾಮಾಜಿಕ ಕಾರ್ಯಕರ್ತ ನವೀನ್ ರೆಡ್ಡಿ ಬೆಂಗಳೂರು, ಉದ್ಯಮಿ ಹರೀಶ್ ಶೆಟ್ಟಿ ಮುಂಬಯಿ, ಕಾರ್ತಿಕ್ ರೆಡ್ಡಿ, ಲಾಂಚುಲಾಲ್ ಕೆ ಎಸ್ ಉಪಸ್ಥಿತರಿದ್ದರು.ಧಾರ್ಮಿಕ ಸಭಾ ಕಾರ್ಯಕ್ರಮದ ನಂತರ ದೊಂದಿ ಬೆಳಕಿನಲ್ಲಿ ಶ್ರೀ ಮಂತ್ರ ದೇವತೆ ದೈವದ ವೈಭವದ ವಾರ್ಷಿಕ ಕೋಲೋತ್ಸವ ಜರಗಗಿತು.
ಪ್ರಮುಖರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಕಟ್ಟೆ ಮಾರ್ ಚಲನಚಿತ್ರ ತಂಡ, ಆಗಮಿಸಿ ದೈವದ ಪ್ರಸಾದ ಸ್ವೀಕರಿಸಿದರು. ಮಂತ್ರ ದೇವತಾ ಕ್ಷೇತ್ರ ಸಾನಿದ್ಯ ಕಟ್ಟೆಮಾರ್ ಧರ್ಮದರ್ಶಿ ಮನೋಜ್ ಕುಮಾರ್ ಕಟ್ಟೆಮಾರ್ ಸ್ವಾಗತಿಸಿದರು. ಕಿಶೋರ್ ಕಟ್ಟೆಮಾರು ವಂದಿಸಿದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.