ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೊಳಂತೂರು ನಲ್ಲಿ ವಾರ್ಷಿಕ ಕ್ರೀಡಾಕೂಟ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಪುಷ್ಪಾ ಡಿ ಕಾರ್ಯಕ್ರಮ ಉದ್ಘಾಟಿಸಿದರು. ಮಾಜಿ ಅಧ್ಯಕ್ಷ ಕೃಷ್ಣಪ್ಪ ಸಫಲ್ಯ, ಪಂಚಾಯತ್ ಮಾಜಿ ಉಪಾಧ್ಯಕ್ಷ ಪ್ರೇಮನಾಥ್ ಶೆಟ್ಟಿ ಅಂತರ, ಅಶೋಕ್ ಶೆಟ್ಟಿ ನೆಲ್ಯಾಡ್ಕ, ಸುನಿತಾ ವಾಸ್ ಪೋಯಿತಾಜೆ, ಪ್ರಭಾರ ಮುಖ್ಯ ಶಿಕ್ಷಕಿ ಪ್ರಸ್ಸಿಲ್ಲ ಉಪಸ್ಥಿತರಿದ್ದರು.