ವಿಶ್ವದ ಬೃಹತ್ ಹಾಗೂ ಲಿಖಿತ ಸಂವಿಧಾನವನ್ನು ಹೊಂದಿರುವ ನಮ್ಮ ದೇಶದಲ್ಲಿ ಸಂವಿಧಾನವು ರಚನೆಯಾಗಿ ಜಾರಿಗೆ ಬಂದ 1950 ಜನವರಿ 26ನೇ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸಲಾಗುತ್ತದೆ. ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ನೇತೃತ್ವದಲ್ಲಿ ಜಾರಿಯಾದ ಈ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನ ಜೀವನ ಭದ್ರತೆಗೆ ಭದ್ರಬುನಾದಿ ಹಾಕಿತು. ಎಂದು ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಜರುಗಿದ 77ನೇ ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಧ್ವಜಾರೋಹಣಗೈದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶಿವಶಂಕರ್ ರಾವ್ ಮಂಚಿ ಮಾತನಾಡಿದರು.
ಸಮಾಜ ವಿಜ್ಞಾನ ಶಿಕ್ಷಕರಾದ ಶ್ರೀ ಜಗನ್ನಾಥ್ ಪಿ ವಿದ್ಯಾರ್ಥಿಗಳಿಗೆ ಗಣರಾಜ್ಯೋತ್ಸವ ದಿನದ ಮಹತ್ವವನ್ನು ಅರ್ಥಪೂರ್ಣವಾಗಿ ತಿಳಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಗಣರಾಜ್ಯೋತ್ಸವ ದಿನದ ಸಲುವಾಗಿ ಅನಿಸಿಕೆಯನ್ನು ವ್ಯಕ್ತಪಡಿಸಿದರು. ದೇಶಭಕ್ತಿ ಗೀತೆಗಳ ಇಂಪಾದ ಹಾಡುಗಳನ್ನು ವಿದ್ಯಾರ್ಥಿಗಳು ಹಾಡಿ ಮನರಂಜಿಸಿದರು.
ಸಂಭ್ರಮದ ಗಣರಾಜ್ಯೋತ್ಸವ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುಶೀಲ ವಿಟ್ಲ ಶುಭಹಾರೈಸಿದರು.
ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ವಿನೋದ ಸ್ವಾಗತಿಸಿ, ಕನ್ನಡ ಭಾಷಾ ಶಿಕ್ಷಕರಾದ ಶಿವಕುಮಾರ್ ಎಂ. ಜಿ. ವಂದಿಸಿದರು. ಗಣಿತ ಶಿಕ್ಷಕಿ ಶ್ರೀಮತಿ ಪುಷ್ಪಾವತಿ ಕಾರ್ಯಕ್ರಮ ನಿರ್ವಹಿಸಿದರು.