


ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು ಕೇಂದ್ರ ಸರ್ಕಾರದ ಮಾಜಿ ವಿತ್ತ ಸಚಿವರಾದ ಬಿ. ಜನಾರ್ದನ ಪೂಜಾರಿ ಅವರು ಹೇಳಿದರು.
ಅವರು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಬಿಲ್ಲವ ಮಹಿಳಾ ಸಮಿತಿ, ಹಾಗೂ ಯುವವಾಹಿನಿ ಬಂಟ್ವಾಳ ಘಟಕದ ಸಹಕಾರದೊಂದಿಗೆ ಬಂಟ್ವಾಳ ಭಂಡಾರಿಬೆಟ್ಟು ಎಸ್.ವಿ.ಎಸ್ ಶಾಲಾ ಮೈದಾನದಲ್ಲಿ 2026 ನೇ ಸಾಲಿನ ಕೋಟಿ ಚೆನ್ನಯ ಕ್ರೀಡೋತ್ಸವ ಉದ್ಘಾಟಿಸಿ ಮಾತನಾಡಿದರು
ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು
ಕೋಟಿ ಚೆನ್ನಯ ಕ್ರೀಡೋತ್ಸವ ಸಂಘಟನೆಗೆ ಶಕ್ತಿ ನೀಡಿದೆ: ಶಾಸಕ ಉಮಾನಾಥ ಕೋಟ್ಯಾನ್, ಕೋಟಿ ಚೆನ್ನಯ ಕ್ರೀಡೋತ್ಸವವು ಬಿಲ್ಲವ ಸಮಾಜದ ಸಂಘಟನೆಗೆ ಹಾಗೂ ಯುವಜನತೆಗೆ ಹೊಸ ಶಕ್ತಿ ಮತ್ತು ಚೈತನ್ಯವನ್ನು ನೀಡಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ಅವರು ಕ್ರೀಡೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿ, ಇಂತಹ ಕ್ರೀಡಾ ಚಟುವಟಿಕೆಗಳು ಯುವಜನತೆಯನ್ನು ಒಗ್ಗೂಡಿಸಿ ಶಿಸ್ತು, ಸಹಕಾರ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಕೋಟಿ ಚೆನ್ನಯ ಕ್ರೀಡೋತ್ಸವವು ಸಮಾಜದ ಒಗ್ಗಟ್ಟು ಹಾಗೂ ಸಂಘಟನಾ ಬಲವನ್ನು ಗಟ್ಟಿಗೊಳಿಸುವ ಉತ್ತಮ ವೇದಿಕೆಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಬಂಟ್ವಾಳ ಡಿವೈಎಸ್.ಪಿ ವಿಜಯ ಪ್ರಸಾದ್ ಗೌರವ ರಕ್ಷೆ ಸ್ವೀಕರಿಸಿ, ಧ್ವಜಾರೋಹಣ ಮಾಡಿದರು . ಗುರುಧರ್ಮ ಪ್ರಚಾರಸಭಾ, ಕರ್ನಾಟಕ ಯೋಜನಾ ಘಟಕದ ಸಂಚಾಲಕರಾದ ಗೋಪಿ ಕೃಷ್ಣಪ್ಪ ಕ್ರೀಡಾ ಜ್ಯೋತಿ ಹಸ್ತಾಂತರ ಮಾಡಿದರು ನಂದಗುಡಿ-ಬೆಂಗಳೂರು ಗ್ರಾಮಾಂತರ ಇನ್‌ಸ್ಪೆಕ್ಟರ್ ಆಫ್ ಪೊಲೀಸ್ ಶಾಂತರಾಮ್ ಕುಂದರ್
ಪಡುಮಲೆ ಕೋಟಿಚೆನ್ನಯ ಜನ್ಮಸ್ಥಾನ, ಸಂಚಲನಾ ಸಮಿತಿ, ಅಧ್ಯಕ್ಷರಾದ ಕೆ. ಹರಿಕೃಷ್ಣ ಬಂಟ್ವಾಳ್, ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಂಜುನಾಥ ಪೂಜಾರಿ, ಹಾಗೂ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಸೂರ್ಯಕಾಂತ್ ಜೆ ಸುವರ್ಣ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು
ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ. ಸುವರ್ಣ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಬಿಜೆಪಿ ದ.ಕ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಡು, , ನಮ್ಮ ಕುಡ್ಲ ಆಡಳಿತ ನಿರ್ದೇಶಕರು ಲೀಲಾಕ್ಷ ಬಿ. ಕರ್ಕೇರಾ, ಮಾಜಿ ಶಾಸಕರಾದ ಎ ರುಕ್ಷಯ ಪೂಜಾರಿ, ಉದ್ಯಮಿ ಪ್ರಕಾಶ್ ಅಂಚನ್, ಗಾಯತ್ರೀ ಎಮ್ ಶಿವಕುಮಾರ್
ಡೆಪ್ಯುಟಿ ಸೂಪರಿಂಟೆಂಡೆಂಟ್ ಅಫ್ ಎಕ್ಸೈಸ್ , ಜಗನ್ನಾಥ ಬಂಗೇರ ಮುಖ್ಯ ಮಂತ್ತಿಗಳ ಮಾಜಿ ಆಪ್ತ ಕಾರ್ಯದರ್ಶಿ, ನಿತೇಶ್ ಇಂಜಿನಿಯರ್ ಮೆಸ್ಕಾಮ್, ಉದ್ಯಮಿ ಲೋಕೇಶ್ ಕರ್ಕೇರ ಹಾಗೂ ಲೋಕೇಶ್ ಸುವರ್ಣ ಕಲ್ಲಡ್ಕ
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು
ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕಿನ 32 ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷರುಗಳು, ಗೆಜ್ಜೆಗಿರಿ ನಂದನಬಿತ್ತ್‌ಲ್ ಕ್ಷೇತ್ರದ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷರಾದ ರಾಮಪ್ಪ ಪೂಜಾರಿ, ಸಂಜೀವ ಪೂಜಾರಿ ಗುರುಕೃಪಾ, ಉಪಾಧ್ಯಕ್ಷ ಜಯಪ್ರಕಾಶ್ ಜೆ.ಎಸ್.
ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್, , ಕೋಶಾಧಿಕಾರಿ ಸುನೀಲ್ ಕುಂದರ್, ಜತೆ ಕಾರ್ಯದರ್ಶಿ ಆನಂದ ಸಾಲ್ಯಾನ್, ಆಂತರಿಕ ಲೆಕ್ಕ ಪರಿಶೋಧಕ ಪ್ರಶಾಂತ್ ಕೋಟ್ಯಾನ್, ಕೋಶಾಧಿಕಾರಿ ಸುಂದರ ಪೂಜಾರಿ ಬೊಳಂಗಡಿ, ಜತೆ ಕಾರ್ಯದರ್ಶಿ ಹರೀಶ್ ಕೋಟ್ಯಾನ್ ಕುದನೆ, ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಬಿಲ್ಲವ ಮಹಿಳಾ ಸಮಿತಿಯ ಉಪಾಧ್ಯಕ್ಷೆ ಭವಾನಿ ಕೆ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು
ಕೋಟಿ ಚೆನ್ನಯ ಕ್ರೀಡಾಕೂಟ :
ಪುರುಷರ ವಿಭಾಗದಲ್ಲಿಕಬಡ್ಡಿ , ಹಗ್ಗಜಗ್ಗಾಟ ವಾಲಿಬಾಲ್ ಮಹಿಳೆಯರ ವಿಭಾಗದಲ್ಲಿ ತ್ರೋಬಾಲ್, ಹಗ್ಗಜಗ್ಗಾಟ ಗುಂಪು ಸ್ಪರ್ಧೆಗಳು ಮತ್ತು ವಿವಿಧ ವಿಭಾಗದಲ್ಲಿ 50 ಮೀ,100 ಮೀ, 200 ಮೀ, ರಿಲೇ, ಗುಂಡೆಸೆತ, ಉದ್ದಜಿಗಿತ, ನಡಿಗೆ ಹಾಗೂ ಲಕ್ಕೀಗೇಮ್ ಸ್ಪರ್ಧೆಗಳು ನಡೆಯಿತು
ಬೆಳಗ್ಗೆ ಗಂಟೆ 09.30 ಬಂಟ್ವಾಳ ತಾಲೂಕಿನ ವಿವಿಧ ಬಿಲ್ಲವ ಸಂಘಗಳ ನಡುವೆ ತೀವ್ರ ಪೈಪೋಟಿಯ ಸ್ಪರ್ಧೆಗಳು ಆರಂಭವಾಯಿತು
ಕೋಟಿ ಚೆನ್ನಯ ಕ್ರೀಡೋತ್ಸವ ಸಮಿತಿಯ ಸಂಚಾಲಕ ಬೇಬಿ ಕುಂದರ್ ಸ್ವಾಗತಿಸಿದರು, ಕಾರ್ಯದರ್ಶಿ ದಿನೇಶ್ ಸುವರ್ಣ ರಾಯಿ ಹಾಗೂ ರೇಣುಕಾ ಕಣಿಯೂರು ಕಾರ್ಯಕ್ರಮ ನಿರೂಪಿಸಿದರು


Be the first to comment on "ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ ಜನಾರ್ದನ ಪೂಜಾರಿ"