ಬಂಟ್ವಾಳ : ಕಲ್ಲಡ್ಕ ಶ್ರೀ ಉಮಾಶಿವ ಕ್ಷೇತ್ರದಲ್ಲಿ ಜ.30ರಂದು ಶ್ರೀ ದೇವರ ಪ್ರತಿಷ್ಠೆ ಬ್ರಹ್ಮಕಲಶದ 13ನೇ ವರ್ಧಂತ್ಯುತ್ಸವ ನಡೆಯಲಿದೆ. ಬೆಳಗ್ಗೆ ಗಣಪತಿ ಹವನ, ಶತರುದ್ರ ಜಪ, ದೈವಗಳಿಗೆ ತಂಬಿಲ, ಕುಂಕುಮಾರ್ಚನೆ, ನವಕ ಕಲಶಾಭಿಷೇಕ, ಶತರುದ್ರ ಕಲಶಾಭಿಷೇಕ, ಧಾರ್ಮಿಕ ಸಭೆ ನಡೆಯಲಿದೆ. ಹವ್ಯಕ ಮಹಾಮಂಡಲ ಅಧ್ಯಕ್ಷ ಹರಿಪ್ರಸಾದ ಪೆರಿಯಾಪು ಅಧ್ಯಕ್ಷತೆ ವಹಿಸಲಿದ್ದಾರೆ. ಉಪ್ಪಳ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಕರ್ಣಾಟಕ ಬ್ಯಾಂಕ್ ನ ಬಿ.ಎಸ್.ರಾಜ, ದ.ಕ.ಜಿ.ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಟಿ.ಜಿ.ರಾಜಾರಾಮ ಭಟ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಸೇವಾ ಸಮಿತಿ ಅಧ್ಯಕ್ಷ ರಾಕೋಡಿ ಈಶ್ವರ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.