ಬ್ರಹ್ಮಕಲಶಾಭಿಷೇಕಕ್ಕೆ ಸಿದ್ದತೆಯಲ್ಲಿರುವ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಖ್ಯಾತ ಉದ್ಯಮಿಗಳಾದ ಶಶಿಧರ್ ಶೆಟ್ಟಿ ಬರೋಡಾ ಅವರು ಭೇಟಿ ನೀಡಿ, ದೇವಸ್ಥಾನದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು.
ಬ್ರಹ್ಮಕಲಶೋತ್ಸವದ ಸ್ವಾಗತ ಸಮಿತಿ ಅಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರು ಶ್ರೀಕ್ಷೇತ್ರದ ಕುರಿತು ಮಾಹಿತಿ ನೀಡಿದರು. ಪುರುಷೋತ್ತಮ ಶೆಟ್ಟಿ ಅಡ್ಯಾರ್, ಪ್ರದೀಪ್ ಆಳ್ವ ಕದ್ರಿ ಜೊತೆಗಿದ್ದರು.
ಶ್ರೀಕ್ಷೇತ್ರ ಪದ್ಯಾಣದ ಆಡಳಿತ ಮೊಕ್ತೇಸರರಾದ ಸತ್ಯನಾರಾಯಣ ಭಟ್ ಸೇರಾಜೆ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷರಾದ ಶ್ಯಾಮ ಸುದರ್ಶನ ಹೊಸಮೂಲೆ, ಸಂಘಟನಾ ಕಾರ್ಯದರ್ಶಿಗಳಾದ ಶಿವಪ್ರಸಾದ್ ರೈ ಅನಿಯಾಲಗುತ್ತು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಅರವಿಂದ ಭಟ್ ಪದ್ಯಾಣ, ಕಾರ್ಯದರ್ಶಿಗಳಾದ ಈಶಾನ್ಯ ಪದ್ಯಾಣ ಕೋಶಾಧಿಕಾರಿ ಪದ್ಯಾಣ ಗೋವಿಂದ ಭಟ್ ಸೇರಿದಂತೆ ಪ್ರಮುಖರು ಸ್ವಾಗತಿಸಿದರು