ವಿನೂತನ ಶೈಲಿಯ ಶ್ವಾಸಕೋಶದ ಯಶಸ್ವಿ ಶಸ್ತ್ರ ಚಿಕಿತ್ಸೆಯಿಂದ ರೋಗಿಗೆ ಜೀವದಾನ

ಮಂಗಳೂರು: ಹಾಸನ ನಗರ ಮೂಲದ ೩೮ ವಯಸ್ಸಿನ ಸಾವು ಬದುಕಿನ ಹೋರಾಟದಲ್ಲಿದ್ದ ಶ್ವಾಸಕೋಶ ಸಂಬಂಧಿ ತೀವ್ರ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಗೆ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯರ ತಂಡವು ವಿನೂತನ ಶೈಲಿಯ ಕ್ಲಿಷ್ಟಕರ ಮತ್ತು ಅಪಾಯಕಾರಿ ಶ್ವಾಸಕೋಶದ ಶಸ್ತ್ರ ಚಿಕಿತ್ಸೆಯನ್ನು ಆಧುನಿಕ ತಂತ್ರಜ್ಞಾನವನ್ನು ಬಳಸಿ, ಯಶಸ್ವಿಯಾಗಿ ನಿರ್ವಹಿಸಿ, ರೋಗಿಗೆ ಜೀವದಾನ ನೀಡಿ ಆರೋಗ್ಯ ಕ್ಷೇತ್ರದಲ್ಲಿ ಒಂದು ಮಹತ್ವದ ಮೈಲಿಗಲ್ಲು ಸ್ಥಾಪಿಸಿದೆ.

ರೋಗಿಯು ದೀರ್ಘ ಕಾಲದ ತೀವ್ರ ಉಸಿರಾಟದ ಸಮಸ್ಯೆ, ಗಂಭೀರ ರಕ್ತ ಹೀನತೆ, ತೀಕ್ಷ್ಣ ಎದೆ ನೋವು, ನಿಶಕ್ತಿ, ಸಮಸ್ಯೆಗಳಿಂದ ಬಳಲುತಿದ್ದು, ನಗರದ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹೃದ್ರೋಗ ಶಾಸ್ತ್ರ ತಜ್ಞರಾದ ಡಾ. ಹೆಚ್. ಪ್ರಭಾಕರ್‌ರವರನ್ನು ಭೇಟಿ ಮಾಡಿ ತಮ್ಮ ತೀವ್ರ ಮತ್ತು ವಿವಿಧ ಮಾರಣಾಂತಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು.

ಸೂಕ್ಷ್ಮವಾಗಿ ರೋಗಿಯನ್ನು ಸಮಗ್ರ ಆರೋಗ್ಯ ತಪಾಸಣೆ ಒಳಪಡಿಸಿದಾಗ ರೋಗಿಯು ತೀವ್ರ ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ಬಳಲುತಿದ್ದು, ರಕ್ತ ಚಲನವಲನದ ಸಮಸ್ಯೆ, ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಯನ್ನು ಪರಿಗಣಿಸಿ, ಈ ಗಂಭೀರ ಕಾಯಿಲೆ ಹೃದಯ ವೈಫಲ್ಯಕ್ಕೆ ಕಾರಣವಾಗಬಹುದು ಎಂದು ಅರಿತು ತಕ್ಷಣ ವೈದ್ಯರು ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿ, ಈ ರೋಗಿಯನ್ನು ಹೃದ್ರೋಗ ಶಸ್ತ್ರ ಚಿಕಿತ್ಸಾ ತಜ್ಞರಾದ ಡಾ. ಆನಂದ್ ಕೆ.ಟಿ.ಯವರನ್ನು ಶಸ್ತ್ರ ಚಿಕಿತ್ಸೆಗಾಗಿ ಭೇಟಿ ಮಾಡಲು ಸಲಹೆ ನೀಡಿದರು. ವೈದ್ಯರು ಗಂಭೀರ ಶ್ವಾಸಕೋಶ ಹೃದ್ರೋಗ ಜೀವಕ್ಕೆ ಅಪಾಯವಾಗುವ ಸವಾಲನ್ನು ಸ್ವೀಕರಿಸಿದರು. ತುರ್ತು ೬ ಗಂಟೆ ಅವಧಿಯ ವಿನೂತನ ಶೈಲಿಯ ಕ್ಲಿಷ್ಟಕರ ಶ್ವಾಸಕೋಶ ಶಸ್ತ್ರ ಚಿಕಿತ್ಸೆಯನ್ನು ಸೂಕ್ತ ಮುಂಜಾಗೃತಾ ಕ್ರಮಗಳನ್ನು ಅನುಸರಿಸಿ, ನಿರ್ವಹಿಸಿ, ಯಶಸ್ವಿಯಾಗಿ ನೆರವೇರಿಸಿ, ರಕ್ತದ ಹೆಪ್ಪುಗಟ್ಟುವಿಕೆಯನ್ನು ತೆಗೆದು ರಕ್ತ ಚಲನವಲನಕ್ಕೆ ಅನುವು ಮಾಡಿದರು. ಈ ಅಪರೂಪದ ಚಿಕಿತ್ಸೆಯಲ್ಲಿ ಹೃದ್ರೋಗ ಶಾಸ್ತ್ರ ಅರಿವಳಿಕೆ ತಜ್ಞರಾದ ಡಾ. ಎಮ್.ಎಮ್. ಚೇತನಾ ಆನಂದ್ ಸಹಕರಿಸಿಸಿದ್ದರು. ರೋಗಿಯು ಚಿಕಿತ್ಸೆಗೆ ಸ್ಪಂದಿಸಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಡುಗಡೆಗೊಂಡು ತಮ್ಮ ನಿವಾಸದಲ್ಲಿ ಸಹಜ ಆರೋಗ್ಯ ಜೀವನ ನಡೆಸುತಿದ್ದಾರೆ.

ಜಾಹೀರಾತು

ಡಾ. ಆನಂದ್‌ರವರು ಯಶಸ್ವಿ ಶಸ್ತ್ರ ಚಿಕಿತ್ಸೆ ಬಳಿಕ ಈ ಕ್ಲಿಷ್ಟಕರ ಶಸ್ತ್ರ ಚಿಕಿತ್ಸೆಯಲ್ಲಿ ಉತ್ತಮ ದರ್ಜೆಯ ಚಿಕಿತ್ಸೆ ನೀಡಿದ್ದು, ಮತ್ತು ಮಾರಣಾಂತಿಕ ಸಮಸ್ಯೆಯನ್ನು ಹೊಂದಿರುವ ರೋಗಿಗೆ ಅತ್ಯಾಧುನಿಕ ತಂತ್ರಜ್ಞಾನದ ಚಿಕಿತ್ಸಾ ವಿಧಾನಗಳಿಂದ ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಫಾದರ್ ಮುಲ್ಲರ್ ಸಮೂಹ ಸಂಸ್ಥೆಗಳ ನಿರ್ದೇಶಕರಾದ ವಂದನೀಯ ಫೋಸಿನ್ ಲೂಕಸ್ ಲೋಬೋರವರು ವೈದ್ಯಕೀಯ ತಂಡದ ಗಮನಾರ್ಹ ಸಾಧನೆಯನ್ನು ಅಭಿನಂದಿಸಿದಾರೆ. ಆಸ್ಪತ್ರೆಯು ಆರೋಗ್ಯ ಕ್ಷೇತ್ರದಲ್ಲಿ ನೂತನ ಪ್ರವೃತ್ತಿ ಮತ್ತು ಆಧುನಿಕ ತಂತ್ರಜ್ಞಾನಗಳಿಗೆ ಹೆಜ್ಜೆ ಹಾಕುತ್ತಿದೆ ಎಂದು ಮಾಹಿತಿ ನೀಡಿದರು.

-ಎಂ. ವಿ. ಮಲ್ಯ

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ವಿನೂತನ ಶೈಲಿಯ ಶ್ವಾಸಕೋಶದ ಯಶಸ್ವಿ ಶಸ್ತ್ರ ಚಿಕಿತ್ಸೆಯಿಂದ ರೋಗಿಗೆ ಜೀವದಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*