ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ ಬೊಳ್ಳಾಯಿ ನಗ್ರಿ ಶಾರದಾ ಭಜನಾಮಂದಿರದ ಸಭಾಂಗಣದಲ್ಲಿ ನಡೆಯಿತು.
ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾಕೇಂದ್ರ ಸಂಚಾಲಕ ವಸಂತ ಮಾಧವ ಉದ್ಘಾಟನೆ ನೆರವೇರಿಸಿ ಮಾತನಾಡಿ, ವ್ಯಕ್ತಿತ್ವ ವಿಕಸನಕ್ಕೆ ಶಿಬಿರ ಅಗತ್ಯ, ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಶಿಬಿರ ಸಹಕಾರಿ ಎಂದರು.
ಸಜಿಪನಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಾಯಾಕುಮಾರಿ, ಪಂಚಾಯತ್ ಅಧ್ಯಕ್ಷೆ ಶೋಭಾ ಶೆಟ್ಟಿ, ಶಾರದಾ ಭಜನಾಮಂದಿರದ ಅಧ್ಯಕ್ಷ ಕೃಷ್ಣಪ್ಪ ಕುಲಾಲ್, ಪ್ರಾಥಮಿಕ ಆರೋಗ್ಯ ಕೇಂದ್ರದ ಜೆನಿಫರ್, ಶಿಕ್ಷಕ ರಕ್ಷಕ ಸಂಘ ಅಧ್ಯಕ್ಷ ಸತೀಶ್ ಬೊಳ್ಳಾಯಿ ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕಿ ವಿನುತಾಲಕ್ಷ್ಮೀ ಉಪಸ್ಥಿತರಿದ್ದರು. ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ ವೈಸ್ ಪ್ರಿನ್ಸಿಪಾಲ್ ಯತಿರಾಜ್ ಪೆರಾಜೆ ಪ್ರಾಸ್ತಾವಿಕವಾಗಿ ಮಾತನಾಡಿ, ಶಿಬಿರದ ಅಗತ್ಯತೆ, ದಿನಚರಿ, ಇತರ ಕಾರ್ಯಕಲಾಪಗಳ ಬಗ್ಗೆ ವಿವರಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಸಹಸಂಯೋಜಕ ದೀಕ್ಷಿತ್, ಸಂಸ್ಕೃತ ಉಪನ್ಯಾಸಕಿ ಪ್ರಸನ್ನಾ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆ ನಾಯಕಿ ಪ್ರಜ್ಞಾ ಸ್ವಾಗತಿಸಿ, ಬಿಸಿಎ ವಿದ್ಯಾರ್ಥಿ ಜಯಸೂರ್ಯ ವಂದಿಸಿದರು. ಬಿಕಾಂ ವಿದ್ಯಾರ್ಥಿನಿ ಧನುಶ್ರೀ ನಿರೂಪಿಸಿದರು. ಪ್ರಥಮ ಬಿಕಾಂ ವಿದ್ಯಾರ್ಥಿ ನಿಖಿಲ್ ಪ್ರಾರ್ಥಿಸಿದರು. ಸಭಾ ಕಾರ್ಯಕ್ರಮದ ನಂತರ ಗಣ್ಯರಿಂದ ಶ್ರಮದಾನದ ಉದ್ಘಾಟನೆ ನೆರವೇರಿತು. ಒಟ್ಟು ೬೭ ಮಂದಿ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಲಿದ್ದಾರೆ.