ಬಂಟ್ವಾಳ ಎಸ್.ವಿ.ಎಸ್. ಕಾಲೇಜಿನ ಎನ್ನೆಸ್ಸೆಸ್ ವಾರ್ಷಿಕ ಶಿಬಿರ ಮಂಚಿ ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ಆರಂಭಗೊಂಡಿತು.
ಈ ಸಂದರ್ಭ ಶಿಬಿರ ಉದ್ಘಾಟಿಸಿ ಮಾತನಾಡಿದ ಸರಕಾರಿ ಪ್ರೌಢಶಾಲೆ ಎಸ್.ಡಿ.ಎಂ.ಸಿ. ಅಧ್ಯಕ್ಷ ಶಿವಶಂಕರ ರಾವ್, ವಿದ್ಯಾರ್ಥಿಯು ಕೇವಲ ಅಧ್ಯಯನಕ್ಕೆ ಸೀಮಿತವಾಗಿರದೆ ಸಾಮಾಜಿಕ ಜೀವನದ ಆಗು-ಹೋಗುಗಳ ಬಗ್ಗೆ ಅರಿವಿರಬೇಕು. ಆಗ ಮಾತ್ರ ಅವನು ಸಂಘಜೀವಿಯಾಗಲು ಸಾಧ್ಯ ಎಂದರು.

ಅಧ್ಯಕ್ಷತೆಯನ್ನು ಶ್ರೀ ವೆಂಕಟರಮಣಸ್ವಾಮಿ ಕಾಲೇಜು ಪ್ರಿನ್ಸಿಪಾಲ್ ಎಂ.ಡಿ.ಮಂಚಿ ವಹಿಸಿ ಮಾತನಾಡಿ, ಯಾವುದೇ ವಿದ್ಯಾರ್ಥಿಗೆ ಶೈಕ್ಷಣಿಕ ಪ್ರಗತಿಯೊಂದಿಗೆ ನೈತಿಕ ಹಾಗೂ ಸಾಮಾಜಿಕ ಪ್ರಗತಿ ಅತಿಮುಖ್ಯ ಅದು ಶಾಲಾ-ಕಾಲೇಜುಗಳಿಗಿಂತ ಈ ರೀತಿಯ ಶಿಬಿರಗಳಿಂದ ದೊರಕುತ್ತದೆ ಎಂದರು.
ಮುಖ್ಯ ಅತಿಥಿಯಾಗಿ ಕೊಳ್ನಾಡು ಸಾಲೆತ್ತೂರು ಲಯನ್ಸ್ ಕ್ಲಬ್ ಅಧ್ಯಕ್ಷ ಉಮಾನಾಥ ರೈ ಮೇರಾವು ವಹಿಸಿದ್ದರು. ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ರಾಮ್‌ಪ್ರಸಾದ್ ರೈ ತಿರುವಾಜೆ, ಮಂಚಿ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಸುಶೀಲ ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಶ್ರೀ ವೆಂಕಟರಮಣಸ್ವಾಮಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶಿವಣ್ಣ ಪ್ರಭು ಎನ್.ಎಸ್.ಎಸ್ ಶಿಬಿರದ ಮಹತ್ವವನ್ನು ತಿಳಿಸಿದರು. ಸರಕಾರಿ ಪ್ರೌಢಶಾಲೆಯ ಶಿಕ್ಷಕರಾದ ತಾರಾನಾಥ ಕೈರಂಗಳ, ಎನ್.ಎಸ್.ಎಸ್. ಘಟಕ ನಾಯಕರಾದ ಕರಿಷ್ಮಾ ಮತ್ತು ಅಮಿತ್ ಪ್ರಭು ಉಪಸ್ಥಿತರಿದ್ದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ.ಕಾಶೀನಾಥ ಶಾಸ್ತ್ರಿ ಎಚ್.ವಿ ಸ್ವಾಗತಿಸಿದರು. ಪ್ರಾಧ್ಯಾಪಕಿ ನಿರೀಕ್ಷಾ ವಂದಿಸಿದರು. ಉಪನ್ಯಾಸಕಿ ಕಾವ್ಯ ನಿರೂಪಿಸಿದರು. ಕರಿಷ್ಮಾ ಸಂಗಡಿಗರು ಪ್ರಾರ್ಥಿಸಿದರು.


Be the first to comment on "ಬಂಟ್ವಾಳ ಎಸ್.ವಿ.ಎಸ್. ಕಾಲೇಜು: ಎನ್.ಎಸ್.ಎಸ್. ವಾರ್ಷಿಕ ಶಿಬಿರ ಉದ್ಘಾಟನೆ"