ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಭಾನುವಾರ ಫೆ.1ರಂದು ನಡೆಯಲಿದೆ.
2023-24 ಮತ್ತು 2024-25ನೇ ಸಾಲಿನ ಕಾರ್ಯಕ್ರಮ ಇದಾಗಿದ್ದು, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಘಾಟಿಸುವರು. ಅತಿಥಿಗಳಾಗಿ ಮಾಜಿ ಸಚಿವ ಬಿ.ರಮಾನಾಥ ರೈ ಭಾಗವಹಿಸುವರು. ಸಾಧಕರನ್ನು ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಅಭಿನಂದಿಸುವರು. ಅಧ್ಯಕ್ಷತೆಯನ್ನು ತಾಲುಕು ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ವಹಿಸುವರು. ಅತಿಥಿಗಳಾಗಿ ತಹಸೀಲ್ದಾರ್ ಮಂಜುನಾಥ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ಕುಮಾರ್ ರೈ, ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗ ಎಇಇ ತಾರಾನಾಥ ಸಾಲಿಯಾನ್, ಪಿಂಚಣಿದಾರರ ಸಂಘದ ಅಧ್ಯಕ್ಷ ಲೋಕನಾಥ ಶೆಟ್ಟಿ, ಸರಕಾರಿ ನೌಕರರ ಸಂಘದ ನಿಕಟಪೂರ್ವ ಅಧ್ಯಕ್ಷ ಉಮಾನಾಥ ರೈ ಮೇರಾವು ಭಾಗವಹಿಸುವರು ಎಂದು ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಹಾಗು ಕಾರ್ಯದರ್ಶಿ ಸಂತೋಷ್ ಕುಮಾರ್ ತಿಳಿಸಿದ್ದಾರೆ.