ಬಂಟ್ವಾಳ ಶ್ರೀ ಮಂಜುನಾಥ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕು ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ನಡೆಯಿತು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷೆ ಲಾವಣ್ಯ ಬಳ್ಳಾಲ್ ವಹಿಸಿದ್ದರು.
ಸ್ವಾವಲಂಬನೆ ಹಾಗೂ ಆತ್ಮವಿಶ್ವಾಸದ ಮೂಲಕ ಜನರು ಬದುಕು ಸಾಗಿಸಲು ಕ್ಷೇತ್ರದ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡ ಶಕ್ತಿಯಾಗಿ ನಿಂತಿದೆ ಎಂದರು.
ಕಾರ್ಯಕ್ರಮವನ್ನು ಬಂಟ್ವಾಳ ತಹಶೀಲ್ದಾರ್ ಮಂಜುನಾಥ್ ಜಿ. ಉದ್ಘಾಟಿಸಿದರು.
ಯೋಜನೆಯ ಉಡುಪಿ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಮಾತನಾಡಿ,ಅಶಕ್ತ ಕುಟುಂಬಗಳಿಗೆ ಸ್ವಾಭಿಮಾನದ ಬದುಕನ್ನು ಯೋಜನೆ ನೀಡಿದೆ ಎಂದರು.
ಉದ್ಯಮಿ ಹರೀಂದ್ರ ಪೈ, ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ರೊನಾಲ್ಡ್ ಡಿಸೋಜ, ಯೋಜನಾಧಿಕಾರಿ ಅಮೃತಾ, ಬಾಳ್ತಿಲ ವಾತ್ಸಲ್ಯಮಯಿ ಮಹಿಳಾ ಸಂಶೋಧನಾ ಕೇಂದ್ರದ ಅಧ್ಯಕ್ಷೆ ಶೈಲಜಾ ರಾಜೇಶ್ ಮುಖ್ಯಅತಿಥಿಗಳಾಗಿ ಭಾಗವಹಿಸಿದ್ದರು. ಮಂಗಳೂರು ಇಂಚರಾ ಫೌಂಡೇಶನ್ ಆಡಳಿತಾಧಿಕಾರಿ ಮಲ್ಲಿಕಾ ಬಂಗೇರ ಅವರು ಸದೃಢ ಸಮಾಜ ನಿರ್ಮಾಣಕ್ಕೆ ಮಹಿಳೆಯರ ಆರೋಗ್ಯ ವಿಚಾರದ ಕುರಿತು ವಿಚಾರ ಮಂಡಿಸಿದರು.
ಸಮಾರಂಭದಲ್ಲಿ ವಾತ್ಸಲ್ಯ ಕಿಟ್ ವಿತರಣೆ, ಮಾಸಾಶನ ವಿತರಣೆ, ತಾಲೂಕಿನ 5 ಅತ್ಯುತ್ತಮ ಜ್ಞಾನವಿಕಾಸ ಒಕ್ಕೂಟಗಳಿಗೆ ಗೌರವಾರ್ಪಣೆ ನಡೆಯಿತು. ಬಂಟ್ವಾಳ ಯೋಜನಾಧಿಕಾರಿ ಜಯಾನಂದ ಪಿ. ಸ್ವಾಗತಿಸಿದರು. ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್ ಕಾರ್ಯಕ್ರಮ ನಿರ್ವಹಿಸಿದರು.


Be the first to comment on "ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕು ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ, ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ"