ಬಂಟ್ವಾಳ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕು ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ, ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ

ಬಂಟ್ವಾಳ ಶ್ರೀ ಮಂಜುನಾಥ ಕಲ್ಯಾಣ ‌ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕು ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ನಡೆಯಿತು.

bantwal

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆಯ ಅಧ್ಯಕ್ಷೆ ಲಾವಣ್ಯ ಬಳ್ಳಾಲ್ ವಹಿಸಿದ್ದರು.
ಸ್ವಾವಲಂಬನೆ ಹಾಗೂ ಆತ್ಮವಿಶ್ವಾಸದ ಮೂಲಕ ಜನರು ಬದುಕು ಸಾಗಿಸಲು ಕ್ಷೇತ್ರದ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡ ಶಕ್ತಿಯಾಗಿ ನಿಂತಿದೆ ಎಂದರು.
ಕಾರ್ಯಕ್ರಮವನ್ನು ಬಂಟ್ವಾಳ ತಹಶೀಲ್ದಾರ್ ಮಂಜುನಾಥ್ ಜಿ. ಉದ್ಘಾಟಿಸಿದರು.
ಯೋಜನೆಯ ಉಡುಪಿ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಮಾತನಾಡಿ,ಅಶಕ್ತ ಕುಟುಂಬಗಳಿಗೆ ಸ್ವಾಭಿಮಾನದ ಬದುಕನ್ನು ಯೋಜನೆ ನೀಡಿದೆ ಎಂದರು.
ಉದ್ಯಮಿ ಹರೀಂದ್ರ ಪೈ, ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ರೊನಾಲ್ಡ್ ಡಿಸೋಜ, ಯೋಜನಾಧಿಕಾರಿ‌ ಅಮೃತಾ, ಬಾಳ್ತಿಲ ವಾತ್ಸಲ್ಯಮಯಿ ಮಹಿಳಾ ಸಂಶೋಧನಾ ಕೇಂದ್ರದ ಅಧ್ಯಕ್ಷೆ ಶೈಲಜಾ ರಾಜೇಶ್ ಮುಖ್ಯಅತಿಥಿಗಳಾಗಿ ಭಾಗವಹಿಸಿದ್ದರು. ಮಂಗಳೂರು ಇಂಚರಾ ಫೌಂಡೇಶನ್ ಆಡಳಿತಾಧಿಕಾರಿ ಮಲ್ಲಿಕಾ ಬಂಗೇರ ಅವರು ಸದೃಢ ಸಮಾಜ ನಿರ್ಮಾಣಕ್ಕೆ ಮಹಿಳೆಯರ ಆರೋಗ್ಯ ವಿಚಾರದ ಕುರಿತು ವಿಚಾರ ಮಂಡಿಸಿದರು.
ಸಮಾರಂಭದಲ್ಲಿ ವಾತ್ಸಲ್ಯ ಕಿಟ್ ವಿತರಣೆ, ಮಾಸಾಶನ ವಿತರಣೆ, ತಾಲೂಕಿನ 5 ಅತ್ಯುತ್ತಮ ಜ್ಞಾನವಿಕಾಸ ಒಕ್ಕೂಟಗಳಿಗೆ ಗೌರವಾರ್ಪಣೆ ನಡೆಯಿತು. ಬಂಟ್ವಾಳ ಯೋಜನಾಧಿಕಾರಿ ಜಯಾನಂದ ಪಿ. ಸ್ವಾಗತಿಸಿದರು. ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts