ಬಂಟ್ವಾಳ

ಕಾಂಗ್ರೆಸ್ ಹಿರಿಯ ನಾಯಕರ ಭೇಟಿ: ಜನಾರ್ದನ ಪೂಜಾರಿ ಮನೆಗೆ ಬಂದು ಆರೋಗ್ಯ ವಿಚಾರಿಸಿದ ಎಂ.ವೀರಪ್ಪ ಮೊಯ್ಲಿ

Former Chief Minister M.Veerappa Moily visit Senior Congress Leader Former Central Minister B.Janardhan Poojary Residence

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಕೇಂದ್ರದ ಮಾಜಿ ಸಚಿವದ್ವಯರಾದ ಎಂ.ವೀರಪ್ಪ ಮೊಯ್ಲಿ ಹಾಗೂ ಬಿ.ಜನಾರ್ದನ ಪೂಜಾರಿ ಅವರ ಭೇಟಿ ಬಂಟ್ವಾಳದ ಪೂಜಾರಿಯವರ ನಿವಾಸದಲ್ಲಿ ನಡೆಯಿತು. ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರದ ಸಚಿವರಾಗಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದ ಮೊಯ್ಲಿ ಹಾಗೂ ಕೇಂದ್ರದ ಪ್ರಭಾವಿ ಸಚಿವರಾಗಿ ಜನಪ್ರಿಯರಾಗಿದ್ದ ಜನಾರ್ದನ ಪೂಜಾರಿ ಪ್ರಭಾವಿ ನಾಯಕರಾಗಿದ್ದವರು. ಭಾನುವಾರ ಅಪರಾಹ್ನ ಮೊಯ್ಲಿ ಅವರು ಪೂಜಾರಿ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಬಳಿಕ ಉಭಯ ನಾಯಕರು ಹಿಂದಿನ ರಾಜಕೀಯ ಸನ್ನಿವೇಶವನ್ನು ಮೆಲುಕು ಹಾಕಿ ಉಭಯಕುಶಲೋಪರಿ ನಡೆಸಿದರು.

ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ, ಮಂಗಳೂರಿನ ಮಾಜಿ ಮೇಯರ್ ಗಳಾದ ಶಶಿಧರ ಹೆಗ್ಡೆ, ಭಾಸ್ಕರ ಕೆ, ಮಂಗಳೂರಿನ ಮಾಜಿ ಕಾರ್ಪೊರೇಟರ್ ಅಶೋಕ್ ಡಿ.ಕೆ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್, ರಿಸರ್ವ್ ಬ್ಯಾಂಕ್ ಮಾಜಿ ನಿರ್ದೇಶಕ ನವೀನ್ ಭಂಡಾರಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.