ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ (BLA) ಸಮ್ಮಿಲನ ಕಾರ್ಯಕ್ರಮ ನಡೆಯಿತು.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ (BLA) ಸಮ್ಮಿಲನ ಕಾರ್ಯಕ್ರಮವು ಪಕ್ಷದ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಕ್ಷೇತ್ರಾಧ್ಯಕ್ಷರಾದ ಶಾಹುಲ್ ಹಮೀದ್ ಎಸ್.ಎಚ್. ಅವರು ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಎಸ್‌ಡಿಪಿಐ ಕರ್ನಾಟಕ ರಾಜ್ಯ ಉಪಾಧ್ಯಕ್ಷೆ ಶಾಹಿದಾ ತಸ್ನೀಂ, ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಎಸ್, ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ಹಾಗೂ ಪಕ್ಷದ ಮುಖಂಡ ಸಲೀಂ ಗುರುವಾಯನಕೆರೆ ಅವರು ಆಗಮಿಸಿ, ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.