ಬಂಟ್ವಾಳ: ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ನಿಮಿತ್ತ ಮಹಾರಥೋತ್ಸವ ಬುಧವಾರ (ಫೆ.4)ರಂದು ನಡೆಯಿತು. ಫೆ.6ರವರೆಗೆ ಜಾತ್ರಾ ಮಹೋತ್ಸವಾದಿಗಳು ನಡೆಯಲಿವೆ.
ಬುಧವಾರ ಬೆಳಗ್ಗೆ ನವಗ್ರಹ ಸಹಿತ ಶಿವಸಹಸ್ರನಾಮ ಹೋಮ, ಮಧ್ಯಾಹ್ನ ಮಹಾಪೂಜೆ ಬಳಿಕ ದೇವರ ರಥಾರೋಹಣ, ಅನ್ನಸಂತರ್ಪಣೆ, ಸಂಜೆ ಭಜನಾ ಸಂಕೀರ್ತನೆ, ಗೊಂಬೆ ಕುಣಿತ, ಮಹಾರಥೋತ್ಸವ ನಡೆಯಿತು. ಈ ವೇಳೆ ಅತ್ಯಾಕರ್ಷಕ ಸುಡುಮದ್ದು ಪ್ರದರ್ಶನ ನಡೆದವು. ಬಳಿಕ ದೇವರ ಬಲಿ ಉತ್ಸವ ನಡೆಯಿತು. ಗುರುವಾರ ರಾತ್ರಿ ದೇವರ ಬಲಿ ಹೊರಟು ಅವಭೃತ ಸ್ನಾನ, ಧ್ವಜಾವರೋಹಣ, ರಾತ್ರಿ ಮಾಗಣೆಯ ಶ್ರೀ ನಾಲ್ಕೈತ್ತಾಯ ದೈವದ ನೇಮ, ಫೆ.6ರಂದು ಸಂಪ್ರೋಕ್ಷಣೆ, ಮಂತ್ರಾಕ್ಷತೆ ನಡೆಯಲಿದೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…