ಬಂಟ್ವಾಳ

ಕಾಂಪ್ರಬೈಲ್: ಮನೆಮಂದಿ ಜಾತ್ರೆಗೆ ಹೋಗಿದ್ದಾಗ ಕಳ್ಳತನ

www.flylinkworld.com

ಮನೆಮಂದಿ ಜಾತ್ರೆಗೆ ತೆರಳಿದ ಸಂದರ್ಭ ಸುಮಾರು 8 ಲಕ್ಷ ರು ಮೌಲ್ಯದ ಚಿನ್ನಾಭರಣಗಳನ್ನು ಕದ್ದೊಯ್ದ ಘಟನೆ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕಾಂಪ್ರಬೈಲು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಸುಮಾರು 9 ಪವನ್ ಚಿನ್ನವನ್ನು ಕಳ್ಳರು ಕದ್ದೊಯ್ದಿದ್ದಾರೆ.

ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಮನೆ ಮಾಲೀಕ ಸತೀಶ್ ಶೆಣೈ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಫೆ.4ರಂದು ಕಶೇಕೋಡಿ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದ  ಜಾತ್ರೋತ್ಸವ ಇದ್ದುದ್ದರಿಂದ ಪತ್ನಿಯೊಂದಿಗೆ ಮನೆಗೆ ಬೀಗ ಹಾಕಿ ಸಂಜೆ 6.45 ಕ್ಕೆ ಮನೆಯಿಂದ ಕಶೆಕೋಡಿಗೆ ಹೊರಟು ಉತ್ಸವ ಮುಗಿಸಿ ವಾಪಸ್ ಮನೆಗೆ ಬಂದಾಗ ರಾತ್ರಿ ಸುಮಾರು 10.30 ಆಗಿದ್ದು, ಈ ವೇಳೆ ಮನೆಯ ಹಿಂಬದಿಯ ಬಾಗಿಲು ತೆರೆದಿರುವುದನ್ನು ನೋಡಿದಾಗ ಯಾರೋ ಕಳ್ಳರು ಯಾವುದೋ ಸಾಧನದಿಂದ ಬಾಗಿಲಿನ ಚಿಲಕವನ್ನು ತುಂಡರಿಸಿ ಬಿದ್ದಿರುವುದು ಕಂಡುಬಂದಿದೆ. ಒಳಗೆ ಬಂದು ಕೋಣೆಯಲ್ಲಿದ್ದ ಕಪಾಟನ್ನು ಯಾವುದೋ ಸಾಧನದಿಂದ ಮೀಟಿ ತೆರೆದಿದ್ದು ಬಟ್ಟೆಗಳೆಲ್ಲಾ ಚೆಲ್ಲಾಪಿಲ್ಲಿಯಾಗಿದ್ದು ಕಂಡುಬಂದಿದೆ. ಕಪಾಟಿನ ಲಾಕರ್ ನಲ್ಲಿದ್ದ ಸ್ಟೀಲ್ ಡಬ್ಬಿಗಳು ಮಂಚದಲ್ಲಿ ತೆರೆದಿದ್ದು ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು. ಸುಮಾರು 5 ಪವನ್ ತೂಕದ ಒಂದು ಹವಳದ ಮಾಲೆ, ಎರಡೂವರೆ ಪವನ್ ತೂಕದ ಒಂದು ಮುತ್ತಿನ ಸರ, ಒಂದೂವರೆ ಪವನ್ ತೂಕದ ಬೆಂಡೋಲೆ, ಜುಂಕಿ, 5000 ರೂ ನಗದು ಹಣವನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.