ಬಂಟ್ವಾಳ

ಬಡಗಬೆಳ್ಳೂರು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನ ಬ್ರಹ್ಮಕಲಶೋತ್ಸವ: ವಿವರಗಳು ಹೀಗಿವೆ

ಬಂಟ್ವಾಳ ತಾಲೂಕು ಬಡಗಬೆಳ್ಳೂರು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಫೆಬ್ರವರಿ 18ರಿಂದ 22ವರೆಗೆ ನಡೆಯಲಿದೆ.

www.flylinkworld.com

ಈ ವಿಷಯವನ್ನು ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಕ್ಷೇತ್ರದಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ದೇವಸ್ಥಾನದ ತಂತ್ರಿಗಳಾದ ವಿಷ್ಣುಮೂರ್ತಿ ತಂತ್ರಿ ಎಡಪದವು ನೇತೃತ್ವ ಹಾಗೂ ವಾಸ್ತುಶಿಲ್ಪಿ ಮಹೇಶ್ ಮುನಿಯಂಗಳ ಮತ್ತು ಪ್ರಶ್ನಾಚಿಂತನೆ ನಡೆಸಿದ ಮಿತ್ತೂರು ಕೇಶವ ಭಟ್ ಮಾರ್ಗದರ್ಶನದಲ್ಲಿ ನೂತನವಾಗಿ ನಿರ್ಮಾಣಗೊಂಡ ಶಿಲಾಮಯ ದೇಗುಲದಲ್ಲಿ ದಿ.ಸದಾಶಿವ ಎಂ.ಕರ್ಕೇರ ಆರಾಧಿಸಿಕೊಂಡು ಬಂದಿರುವ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ಅಮ್ಮನವರ ಹಾಗೂ ಧರ್ಮದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು 18ರಿಂದ 22ರವರೆಗೆ ಪ್ರತಿದಿನ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, 22ರಂದು ಬ್ರಹ್ಮಕಲಶಾಬಿಷೇಕ ನಡೆಯಲಿದೆ. ಪ್ರತಿದಿನ ಧಾರ್ಮಿಕ ಸಭಾ ಕಾರ್ಯಕ್ರಮಗಳು ಇರಲಿವೆ ಎಂದರು.

PRESS MEET

ಬೃಹತ್ ಹೊರೆಕಾಣಿಕೆ ಮೆರವಣಿಗೆ:

ಜಾಹೀರಾತು

ಈ ಸಂದರ್ಭ ಮಾಹಿತಿ ನೀಡಿದ ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಚಂದ್ರಹಾಸ ಪಲ್ಲಿಪ್ಪಾಡಿ, ಫೆ.15ರಂದು ಬಾನುವಾರ ಬೃಹತ್ ಹಸಿರು ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಿಂದ ವೈಭವದ ಹೊರೆಕಾಣಿಕೆ ಮೆರವಣಿಗೆಯು ಮಂಗಾಜೆ-ಧನುಪೂಜೆ ಮಾರ್ಗವಾಗಿ ಹೊರೆಕಾಣಿಕೆ ವಾಹನಗಳೊಂದಿಗೆ ಕಲ್ಪನೆಯಲ್ಲಿ ಸೇರುವುದು. ಅಲ್ಲಿಂದ 4 ಗಂಟೆಗೆ ಕಾಲ್ನಡಿಗೆ ಮೂಲಕ ಹೊರಟು ಕಾವೇಶ್ವರ ಮಾರ್ಗವಾಗಿ ಆದಿಶಕ್ತಿ ದೇವಸ್ಥಾನಕ್ಕೆ ಮೆರವಣಿಗೆ ಸಾಗಲಿದೆ ಎಂದರು.

ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ದೇವಪ್ಪ ಪುಜಾರಿ ಬಾಳಿಕೆ ಸಮಿತಿ ಹಾಗೂ ದೇವಸ್ಥಾನ ನಡೆದುಬಂದ ದಾರಿ ಕುರಿತು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಉಮೇಶ್ ಸಾಲ್ಯಾನ್ ಬೆಂಜನಪದವು, ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನ ಸೇವಾ ಟ್ರಸ್ಟ್ (ರಿ) ಟ್ರಸ್ಟಿಗಳಾದ ವಸಂತ ಎಂ.ಬೆಳ್ಳೂರು, ಶಶಿಕಿರಣ್ ಪೂಜಾರಿ ಬೆಳ್ಳೂರು ಉಪಸ್ಥಿತರಿದ್ದು ಪೂರಕ ಮಾಹಿತಿ ನೀಡಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.