ಜಕ್ರಿಬೆಟ್ಟು ಡ್ಯಾಮ್ ನಲ್ಲಿ ಜಲಸಮೃದ್ಧಿ | ನದಿ ಮಾಲಿನ್ಯ ನಿಯಂತ್ರಣ ಸವಾಲು

NETRAVATI DAM, JAKRIBETTU, BANTWAL

ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು ೧೩೫ ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಗೇಟ್ ಹಾಕಿ ನೀರು ಸಂಗ್ರಹ ಆರಂಭಗೊಂಡಿದೆ. ಇದರೊಂದಿಗೆ ಅಣೆಕಟ್ಟಿನಲ್ಲಿ ಜಲಸಮೃದ್ಧಿಯಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಆಗಲಿಕ್ಕಿಲ್ಲ ಎಂದು ಭಾವಿಸಲಾಗಿದೆ. ತೊಂದರೆ ಏನಾದರೂ ಇದ್ದರೆ ಅದು ಪೈಪ್ ಲೈನ್ ಮೂಲಕ ವಿತರಣಾ ವ್ಯವಸ್ಥೆಯಲ್ಲಾಗುವ ಲೋಪವಷ್ಟೇ.

www.flylinkworld.com

ಡ್ಯಾಂ ಹೇಗಿದೆ:

ಜಕ್ರಿಬೆಟ್ಟು ಸೇತುವೆ ಸಹಿತ ಕಿಂಡಿ ಅಣೆಕಟ್ಟಿನ ಉದ್ದ ೩೫೧.೨೫ ಮೀ. ಹಾಗೂ ೫.೫೦ ಮೀ. ಎತ್ತರವಿದ್ದು, ಪೂರ್ತಿ ಗೇಟ್ ಅಳವಡಿಸಿದರೆ ೧೬೬ ಎಂಸಿಎಫ್‌ಟಿ ನೀರು ಶೇಖರಣೆಗೊಂಡು ಸುಮಾರು ೫ ಕಿ.ಮೀ.ವರೆಗೆ ಹಿನ್ನೀರು ವ್ಯಾಪಿಸಲಿದೆ. ಸೇತುವೆಯ ಅಗಲ ೭.೫೦ ಮೀ. ಇದ್ದು, ಒಟ್ಟು ೨೧ ಕಿಂಡಿಗಳಿವೆ. ೧೨ ಮೀ. ಅಗಲದ ವರ್ಟಿಕಲ್ ಲಿಫ್ಟ್ ಗೇಟ್‌ಗಳಿದ್ದು, ಮಧ್ಯದಲ್ಲಿ ಎರಡು ಸ್ಕವರ್‍ಸ್ ಸ್ಲೂಯಿಸ್ ಗೇಟ್‌ಗಳಿರುತ್ತವೆ. ತುರ್ತು ಪ್ರವಾಹದ ಸಂದರ್ಭ ನೀರಿನ್ನು ಕೆಳಕ್ಕೆ ಕಳುಹಿಸುವ ಉದ್ದೇಶದಿಂದ ಸ್ಕವರ್‍ಸ್ ಸ್ಲೂಯಿಸ್ ಗೇಟ್‌ಗಳನ್ನು ಅಳವಡಿಸಲಾಗಿದ್ದು, ಇದು ಲಿಫ್ಟ್ ಗೇಟ್‌ಗಳಿಗಿಂತ ತೀರಾ ಕೆಳಸ್ತರದಲ್ಲಿರುತ್ತದೆ. ಹೀಗಾಗಿ ತಳ ಭಾಗದಲ್ಲಿ ಮರಳು ಸಂಗ್ರಹಗೊಂಡರೆ ಅದನ್ನು ಹೊರಕ್ಕೆ ಕಳುಹಿಸಲು ಅನುಕೂಲವಾಗುವ ದೃಷ್ಟಿಯಿಂದ ಈ ಗೇಟ್‌ಗಳನ್ನು ವಿನ್ಯಾಸಗೊಳಿಸಲಾಗಿದೆ.

ಜಾಹೀರಾತು

ತೋಟಗಳಿಗೆ ನುಗ್ಗದಂತೆ ಕ್ರಮವಾಗಲಿ:

ಕಳೆದ ವರ್ಷ ಅಣೆಕಟ್ಟಿನ ಗೇಟ್ ಪೂರ್ತಿ ಬಂದ್ ಮಾಡಿದ ಸಂದರ್ಭದಲ್ಲಿ ೪.೫೦ ಮೀ. ಎತ್ತರಕ್ಕೆ ನೀರು ಸಂಗ್ರಹಗೊಳ್ಳುತ್ತಿದ್ದಂತೆ ಜಕ್ರಿಬೆಟ್ಟು, ಮಣಿಹಳ್ಳ ಭಾಗದ ತೋಟಗಳಿಗೆ ನೀರು ನುಗ್ಗಿ ಗೇಟ್ ತೆರವು ಮಾಡುವಂತೆ ಆಗ್ರಹಗಳು ಕೇಳಿಬಂದಿತ್ತು. ಬಳಿಕ ನೀರಿನ ಮಟ್ಟವನ್ನು ಇಳಿಸಲಾಗಿತ್ತು. ಈ ವರ್ಷ ಎರಡು ತೋಡುಗಳಿಗೆ ಮಣ್ಣಿನ ಕಟ್ಟ ಹಾಕಿ ಹಿನ್ನೀರು ತೋಡಿಗೆ ಹರಿಯದಂತೆ ಕ್ರಮಕೈಗೊಂಡ ಬಳಿಕ ಗೇಟ್ ಹಾಕುವ ಸಾಧ್ಯತೆ ಇದೆ.

ನದಿ ಮಾಲಿನ್ಯ ನಿಯಂತ್ರಣ ಸವಾಲು

ಜಕ್ರಿಬೆಟ್ಟು ಡ್ಯಾಂ ಹೆದ್ದಾರಿ ಪಕ್ಕವೇ ಇದ್ದು, ಇಲ್ಲಿ ಯಾರ್ಯಾರೋ ಕಸ ತಂದು ಸೇತುವೆ ಬಳಿ ಎಸೆಯುತ್ತಾರೆ ಎಂಬ ದೂರಿದೆ. ಹಾಗೆಯೇ ತುಂಬೆ ಡ್ಯಾಂ ವರೆಗೆ ಕುಡಿಯುವ ನೀರು ಎಂದು ಪರಿಗಣಿಸಲಾಗುವ ನೇತ್ರಾವತಿ ಒಡಲಿಗೆ ತ್ಯಾಜ್ಯ ಸೇರುವುದು ಇನ್ನೂ ನಿಂತಿಲ್ಲ. ಕೊಳಚೆ ನೀರು ಸಂಸ್ಕರಣಾ ಘಟಕ (ಎಸ್‌ಟಿಪಿ)ಗಳ ನಿರ್ಮಾಣಕ್ಕೆ ಜಾಗದ ಸಮಸ್ಯೆ ಅಂತಿಮಗೊಳ್ಳದೇ ಇರುವುದರಿಂದ ಒಳಚರಂಡಿ ವ್ಯವಸ್ಥೆ ಅನುಷ್ಠಾನ ಸಾಧ್ಯವಾಗಿಲ್ಲ. ಇನ್ನೂ ನಿಂತಿಲ್ಲ. ತುಂಬೆ ವೆಂಟೆಡ್ ಡ್ಯಾಮ್ ನ ಸಮೀಪ ಹಾಗೂ ಜಕ್ರಿಬೆಟ್ಟು ಡ್ಯಾಂ ಪಕ್ಕದಲ್ಲೇ ಕೊಳಚೆ ನೀರು ನದಿಗೆ ಸೇರುತ್ತಿದೆ ಎಂಬ ದೂರುಗಳಿಗೆ ಸ್ಪಂದನೆ ಇನ್ನೂ ಸರಿಯಾಗಿ ದೊರಕಿಲ್ಲ.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಜಕ್ರಿಬೆಟ್ಟು ಡ್ಯಾಮ್ ನಲ್ಲಿ ಜಲಸಮೃದ್ಧಿ | ನದಿ ಮಾಲಿನ್ಯ ನಿಯಂತ್ರಣ ಸವಾಲು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*