ಬಂಟ್ವಾಳ: ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ಕರೆ ನೀಡಿದ ಅಖಿಲ ಭಾರತ ಮುಷ್ಕರದ ಅಂಗವಾಗಿ ಎ.ಐ.ಸಿ.ಸಿ.ಟಿ.ಯು ವತಿಯಿಂದ ಬಿ.ಸಿ.ರೋಡ್ ನಲ್ಲಿ ಪ್ರತಿಭಟನೆ ನಡೆಯಿತು. ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಮತ್ತು ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಐಸಿಸಿಟಿಯು ಜಿಲ್ಲಾ ಅಧ್ಯಕ್ಷರಾದ ರಾಮಣ್ಣ ವಿಟ್ಲ ಮಾತನಾಡಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ಕಾಯ್ದೆಗಳ ತಿದ್ದುಪಡಿಗಳು ಕಾರ್ಮಿಕರ ಹಕ್ಕುಗಳಿಗೆ ಹಾನಿಕಾರಕವಾಗಿದ್ದು, ಕೆಲಸದ ಭದ್ರತೆ, ಕನಿಷ್ಠ ವೇತನ ಹಾಗೂ ಸಾಮಾಜಿಕ ಭದ್ರತೆಯನ್ನು ದುರ್ಬಲಗೊಳಿಸುತ್ತವೆ ಎಂದು ಆಕ್ಷೇಪಿಸಿದರು. ಈ ತಿದ್ದುಪಡಿಗಳನ್ನು ತಕ್ಷಣ ಹಿಂಪಡೆಯಬೇಕೆಂದು ಅವರು ಆಗ್ರಹಿಸಿದರು.
ಎಐಸಿಸಿಟಿಯು ಜಿಲ್ಲಾ ಕಾರ್ಯದರ್ಶಿ ಮೋಹನ್ ಕೆ.ಇ ಮಾತನಾಡಿ ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಪಾಲಿಗೆ ಮರಣ ಶಾಸನ ವಾಗಿದೆ ಎಂದು ಆರೋಪಿಸಿದರು. ಕಾರ್ಮಿಕ ಮುಖಂಡರಾದ ಅನ್ಸಾರ್ ಬಜಾಲ್, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಶಾಹುಲ್ ಹಮೀದ್ ಮಾತನಾಡಿದರು.
ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿದರು. ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಜಯಶ್ರೀ ಆರ್.ಕೆ, ಕಾರ್ಮಿಕ ಮುಖಂಡರಾದ ಸಂಜೀವ ಬೆಳ್ತಂಗಡಿ, ಪ್ರಗಿತಿಪರ ಮಹಿಳಾ ಸಂಘಟನೆಯ ಅಧ್ಯಕ್ಷ ರಾದ ಸುಧಾ ರಾವ್, ಕಾರ್ಯದರ್ಶಿ ಕುಸುಮ,ಎ.ಐ.ಕೆ.ಎಂ ಅಧ್ಯಕ್ಷ ರಾದ ಮಹಾವೀರ್ ಜೈನ್, ಕಾರ್ಯದರ್ಶಿ ಅಚ್ಯುತ ಕಟ್ಟೆ ಐಪಿಸಿಎಲ್ ಮಾರ್ಟಿನ್ ಅನಿಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.
| ಫೆಬ್ರವರಿ 20ರಂದು ಪ್ರಶಸ್ತಿ ಪ್ರದಾನ (more…)