ಬಂಟ್ವಾಳ ಪುರಸಭೆಯ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆ ವಿಚಾರದಲ್ಲಿ ಪುರಸಭೆಯ ವಾಸಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಶಾಸಕ ರಾಜೇಶ್ ನಾಯ್ಕ್ ಅವರು ಜಿಲ್ಲಾಧಿಕಾರಿ ಅವರಿಗೆ ಸೂಚನೆ ನೀಡಿದ್ದಾಗಿ ಶಾಸಕರ ಪ್ರಕಟಣೆ ತಿಳಿಸಿದೆ.
ಶುಕ್ರವಾರ ಕುಡಿಯುವ ನೀರು ಪೂರೈಕೆಗಾಗಿ ನಾಗರೀಕರು ಪ್ರತಿಭಟನೆ ಮಾಡಿದಾಗ ಮತ್ತೆ ಜಿಲ್ಲಾಧಿಕಾರಿ ಅವರಿಗೆ ಪೋನ್ ಮೂಲಕ ಸಂಪರ್ಕ ಮಾಡಿ ಸಮಸ್ಯೆ ಬಗೆಹರಿಸಿ ,ಕುಡಿಯುವ ನೀರು ಸರಬರಾಜು ಮಾಡುವಂತೆ ಸೂಚನೆ ನೀಡಿದ್ದಾರೆ. ಶಾಸಕರ ಸೂಚನೆಯಂತೆ ಜಿಲ್ಲಾಧಿಕಾರಿ ಅವರು ಪುರಸಭೆಗೆ ಎ.ಸಿ.ಹಾಗೂ ಪಿಡಿಯವರನ್ನು ಪುರಸಭೆಗೆ ಕರೆಸಿದ್ದಾರೆ. ಸೋಮವಾರದೊಳಗೆ ಇಲ್ಲಿನ ಸಮಸ್ಯೆಗಳಿಗೆ ಪರಿಹಾರವನ್ನು ಮಾಡಬೇಕು ಇಲ್ಲದಿದ್ದರೆ ಫೆ.16 ರಂದು ಸೋಮವಾರ ಬೆಳಿಗ್ಗೆ ಸ್ವತಃ ಶಾಸಕನಾಗಿ ನಾನೇ ಪುರಸಭೆಯಲ್ಲಿ ಕುಳಿತು ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆಯ ಮಾತುಗಳನ್ನು ಜಿಲ್ಲಾಧಿಕಾರಿ ಅವರಲ್ಲಿ ಹೇಳಿದ್ದಾರೆ ಎಂದು ಶಾಸಕರ ಪ್ರಕಟಣೆ ತಿಳಿಸಿದೆ.‘
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಶಾಸಕ ರಾಜೇಶ್ ನಾಯ್ಕ್ ಸೂಚನೆ"
Be the first to comment on "ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಶಾಸಕ ರಾಜೇಶ್ ನಾಯ್ಕ್ ಸೂಚನೆ"