ಬಂಟ್ವಾಳ ಪುರಸಭೆಯ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆ ವಿಚಾರದಲ್ಲಿ ಪುರಸಭೆಯ ವಾಸಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಶಾಸಕ ರಾಜೇಶ್ ನಾಯ್ಕ್ ಅವರು ಜಿಲ್ಲಾಧಿಕಾರಿ ಅವರಿಗೆ ಸೂಚನೆ ನೀಡಿದ್ದಾಗಿ ಶಾಸಕರ ಪ್ರಕಟಣೆ ತಿಳಿಸಿದೆ.
ಶುಕ್ರವಾರ ಕುಡಿಯುವ ನೀರು ಪೂರೈಕೆಗಾಗಿ ನಾಗರೀಕರು ಪ್ರತಿಭಟನೆ ಮಾಡಿದಾಗ ಮತ್ತೆ ಜಿಲ್ಲಾಧಿಕಾರಿ ಅವರಿಗೆ ಪೋನ್ ಮೂಲಕ ಸಂಪರ್ಕ ಮಾಡಿ ಸಮಸ್ಯೆ ಬಗೆಹರಿಸಿ ,ಕುಡಿಯುವ ನೀರು ಸರಬರಾಜು ಮಾಡುವಂತೆ ಸೂಚನೆ ನೀಡಿದ್ದಾರೆ. ಶಾಸಕರ ಸೂಚನೆಯಂತೆ ಜಿಲ್ಲಾಧಿಕಾರಿ ಅವರು ಪುರಸಭೆಗೆ ಎ.ಸಿ.ಹಾಗೂ ಪಿಡಿಯವರನ್ನು ಪುರಸಭೆಗೆ ಕರೆಸಿದ್ದಾರೆ. ಸೋಮವಾರದೊಳಗೆ ಇಲ್ಲಿನ ಸಮಸ್ಯೆಗಳಿಗೆ ಪರಿಹಾರವನ್ನು ಮಾಡಬೇಕು ಇಲ್ಲದಿದ್ದರೆ ಫೆ.16 ರಂದು ಸೋಮವಾರ ಬೆಳಿಗ್ಗೆ ಸ್ವತಃ ಶಾಸಕನಾಗಿ ನಾನೇ ಪುರಸಭೆಯಲ್ಲಿ ಕುಳಿತು ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆಯ ಮಾತುಗಳನ್ನು ಜಿಲ್ಲಾಧಿಕಾರಿ ಅವರಲ್ಲಿ ಹೇಳಿದ್ದಾರೆ ಎಂದು ಶಾಸಕರ ಪ್ರಕಟಣೆ ತಿಳಿಸಿದೆ.‘
| ಫೆಬ್ರವರಿ 20ರಂದು ಪ್ರಶಸ್ತಿ ಪ್ರದಾನ (more…)