ರೈತರು ನೀಡಿದ ಅಕ್ರಮ ಸಕ್ರಮ ಅರ್ಜಿಯನ್ನು ಶೀಘ್ರ ವಿಲೇವಾರಿ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ದ.ಕ. ಜಿಲ್ಲಾ ಸಮಿತಿ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ.
ಚುನಾವಣೆ ಸಂದರ್ಭವಷ್ಟೇ ರಾಜಕೀಯ ಪಕ್ಷಗಳಿಗೆ ಜನರ ನೆನಪಾಗುತ್ತದೆ, ಭರವಸೆ ನೀಡಿದ ಬಳಿಕ ಅವರೇ ಮರೆತುಬಿಡುತ್ತಾರೆ, ರೈತರ ಸ್ವಾಧೀನದಲ್ಲಿರುವ ಕುಮ್ಕಿ ಜಮೀನುಗಳ ಮೇಲಿನ ಹಕ್ಕು ಕಸಿಯುವ ಪ್ರಯತ್ನ ಸರಿಯಲ್ಲ ಎಂದು ರಾಜ್ಯ ಕಾರ್ಯದರ್ಶಿ ಮನೋಹರ ಶೆಟ್ಟಿ ನಡಿಕಂಬಳಗುತ್ತು ಹೇಳಿದರು.
ಆ ಭೂಮಿಯಲ್ಲಿ ರೈತರು ಕೃಷಿ ಮಾಡಲು ಅವಕಾಶ ಮಾಡಿಕೊಡಬೇಕು. ಅಕ್ರಮ ಸಕ್ರಮ ಜಮೀನಿಗೆ ಅರ್ಜಿ ಹಾಕಿದ ರೈತರಿಗೆ ತೊಂದರೆ ನೀಡದೆ ಶೀಘ್ರ ಹಕ್ಕು ಪತ್ರಗಳನ್ನು ವಿತರಿಸಬೇಕು ಎಂದರು. ಪ್ರಮುಖರಾದ ಎಂ.ಸುಬ್ರಹ್ಮಣ್ಯ ಭಟ್, ಶ್ರೀಧರ ಶೆಟ್ಟಿ ಬೈಲಗುತ್ತು, ರೊನಾಲ್ಡ್ ಡಿಸೋಜ, ಮುರುವ ಮಹಾಬಲ ಭಟ್, ಸುದೇಶ್ ಮಯ್ಯ ಸುದ್ದಿಗೋಷ್ಠಿಯಲ್ಲಿದ್ದರು.
| ಫೆಬ್ರವರಿ 20ರಂದು ಪ್ರಶಸ್ತಿ ಪ್ರದಾನ (more…)