ಬಂಟ್ವಾಳ

ಬಿ.ಸಿ.ರೋಡಿನ ಕೈಕಂಬ ಸಮೀಪ ಬೆಂಕಿ ಆಕಸ್ಮಿಕ

ಬಂಟ್ವಾಳ: ಬಿ.ಸಿ.ರೊಡಿನ ಕೈಕಂಬದಲ್ಲಿರುವ ಖಾಸಗಿ ಖಾಲಿ ಜಾಗವೊಂದರಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಸಮೀಪದ ಸಂಚಯಗಿರಿಯವರೆಗೂ ವ್ಯಾಪಿಸಿತು.

ಹುಲ್ಲಿನಿಂದ ತುಂಬಿದ್ದ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹೇಗೆ ಆಯಿತು ಎಂಬ ಕುರಿತು ಇನ್ನಷ್ಟೇ ತಿಳಿದುಬರಬೇಕಿದೆ. ಮಾಹಿತಿ ದೊರೆತ ಕೂಡಲೇ ಸ್ಥಳೀಯರು ಬಂಟ್ವಾಳದ ಅಗ್ನಿಶಾಮಕದಳಕ್ಕೆ ಕರೆ ಮಾಡಿದ್ದು, ಈ ವೇಳೆ ಬಂಟ್ವಾಳದಲ್ಲಿದ್ದ ಏಕೈಕ ಅಗ್ನಿನಂದಕ ವಾಹನ ಮಂಚಿಯಲ್ಲಿ ಕರೆಯೊಂದರ ಮೇಲೆ ತೆರಳಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿನಿಂದ ವಾಹನ ಆಗಮಿಸಿದ್ದು, ಅಷ್ಟರಲ್ಲಾಗಲೇ ಸ್ಥಳೀಯರು ನಂದಿಸುವ ಕಾರ್ಯ ಆರಂಭಿಸಿದರು. ಈ ಜಾಗದ ಹಿಂಭಾಗ ಸಂಚಯಗಿರಿ ಬಡಾವಣೆ ಇದ್ದು, ಇಲ್ಲಿಯೂ ಕೆಲ ಭಾಗಕ್ಕೆ ಬೆಂಕಿ ವ್ಯಾಪಿಸಿತು. ಗ್ರಾಮ ಆಡಳಿತಾಧಿಕಾರಿ ಯಶ್ವಿತಾ, ಸಿಬ್ಬಂದಿ ಸದಾಶಿವ ಕೈಕಂಬ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಸ್ಥಳೀಯರಾದ ಸಮದ್ ಕೈಕಂಬ ಮತ್ತಿತರರು, ಸಂಚಯಗಿರಿ ನಾಗರಿಕ ಕ್ರಿಯಾ ಸಮಿತಿಸಿ ಅಧ್ಯಕ್ಷ ಸುರೇಶ್ ಕುಲಾಲ್ ಮತ್ತಿತರು ಆಗಮಿಸಿ ಬೆಂಕಿ ನಂದಿಸುವಲ್ಲಿ ಸಹಕರಿಸಿದರು.

ಜಾಗ ಖರೀದಿಸಿ ಖಾಲಿ ಬಿಟ್ಟುಬಿಡುವವರು ಜಾಗದಲ್ಲಿ ಹುಲ್ಲು ಬೆಳೆದು ಸಮೀಪದವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು, ಅಗ್ನಿ ಆಕಸ್ಮಿಕದಂಥ ಸಂದರ್ಭ ಸ್ಥಳೀಯರು ಹರಸಾಹಸಪಡಬೇಕಾಗುತ್ತದೆ. ಈ ಕುರಿತು ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಈ ಸಂದರ್ಭ ಒತ್ತಾಯಿಸಿದರು.

ಜಾಹೀರಾತು
www.flylinkworld.com

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.