ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಸಂತ ಶ್ರೀ ಸೇವಾಲಾಲ ಜಯಂತಿ ಆಚರಣೆ ನಡೆಯಿತು.
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಿ.ಸಿ.ರೋಡಿನ ಆಡಳಿತ ಸೌಧದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿದ ತಹಸೀಲ್ದಾರ್ ಜಿ. ಮಂಜುನಾಥ್, ಪವಾಡ ಪುರುಷ ಸೇವಾಲಾಲರು ತಮ್ಮ ದೈವೀ ಲೀಲೆಗಳ ಮೂಲಕ ಜನರ ಮನ ಗೆದ್ದಿದ್ದರು. ಸೇವಾಲಾಲ್ ಮಹಾರಾಜರು ಬಂಜಾರ ಸಮುದಾಯದ ಸಂಸ್ಕೃತಿ, ಭಾಷೆ ಮತ್ತು ಹಕ್ಕುಗಳಿಗಾಗಿ ಬದುಕು ಮುಡಿಪಾಗಿಟ್ಟ ಮಹಾನ್ ಚೇತನ ಎಂದು ಹೇಳಿದರು.

ಈ ಸಂದರ್ಭ ಕರಾವಳಿ ಶ್ರೀ ಸೇವಾಲಾಲ್ ಬಂಜಾರ (ಲಂಬಾಣಿ) ಸಂಘ (ರಿ) ಪ್ರಧಾನ ಕಾರ್ಯದರ್ಶಿ ಪಿಡಿಒ ಕೃಷ್ಣ ನಾಯ್ಕ್, ಸಾಲೆತ್ತೂರು ಶಾಲೆ ಪ್ರಭಾರ ಮುಖ್ಯ ಶಿಕ್ಷಕ ದಿಲೀಪ್ ಕುಮಾರ್ ರಜಪೂತ್ ಸಂತ ಶ್ರೀ ಸೇವಾಲಾಲ್ ರವರ ಕುರಿತು ಮಾತನಾಡಿದರು.

ಕೇಂದ್ರ ಸ್ಥಾನಿಯ ಉಪತಹಸೀಲ್ದಾರ್ ನರೇಂದ್ರ ನಾಥ್ ಮಿತ್ತೂರು, ಉಪತಹಸೀಲ್ದಾರ್ ಶಿವಪ್ರಸಾದ್, ಕರಾವಳಿ ಶ್ರೀ ಸೇವಾಲಾಲ್ ಬಂಜಾರ (ಲಂಬಾಣಿ) ಸಂಘ (ರಿ) ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಂಜುನಾಥ್ ಕೆ.ಎಚ್ ಮತ್ತು ಬಂಟ್ವಾಳ ತಾಲೂಕು ಪದಾಧಿಕಾರಿ ಕರಿಬಸಪ್ಪ ನಾಯಕ್ ಜಿ ಹಾಜರಿದ್ದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್ ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಆಡಳಿತಾಧಿಕಾರಿಗಳು ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ಉಪತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು ಸ್ವಾಗತಿಸಿ ವಂದಿಸಿದರು.


Be the first to comment on "ಬಂಟ್ವಾಳ: ಸಂತ ಶ್ರೀಸೇವಾಲಾಲ ಜಯಂತಿ ಆಚರಣೆ"