ಬಂಟ್ವಾಳ

ಬಂಟ್ವಾಳ: ಸಂತ ಶ್ರೀಸೇವಾಲಾಲ ಜಯಂತಿ ಆಚರಣೆ

ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಸಂತ ಶ್ರೀ ಸೇವಾಲಾಲ ಜಯಂತಿ ಆಚರಣೆ ನಡೆಯಿತು.

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಿ.ಸಿ.ರೋಡಿನ ಆಡಳಿತ ಸೌಧದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿದ ತಹಸೀಲ್ದಾರ್ ಜಿ. ಮಂಜುನಾಥ್, ಪವಾಡ ಪುರುಷ ಸೇವಾಲಾಲರು ತಮ್ಮ ದೈವೀ ಲೀಲೆಗಳ ಮೂಲಕ ಜನರ ಮನ ಗೆದ್ದಿದ್ದರು. ಸೇವಾಲಾಲ್ ಮಹಾರಾಜರು ಬಂಜಾರ ಸಮುದಾಯದ ಸಂಸ್ಕೃತಿ, ಭಾಷೆ ಮತ್ತು ಹಕ್ಕುಗಳಿಗಾಗಿ ಬದುಕು ಮುಡಿಪಾಗಿಟ್ಟ ಮಹಾನ್ ಚೇತನ ಎಂದು ಹೇಳಿದರು.

ಈ ಸಂದರ್ಭ ಕರಾವಳಿ ಶ್ರೀ ಸೇವಾಲಾಲ್ ಬಂಜಾರ (ಲಂಬಾಣಿ) ಸಂಘ (ರಿ) ಪ್ರಧಾನ ಕಾರ್ಯದರ್ಶಿ ಪಿಡಿಒ ಕೃಷ್ಣ ನಾಯ್ಕ್, ಸಾಲೆತ್ತೂರು ಶಾಲೆ ಪ್ರಭಾರ ಮುಖ್ಯ ಶಿಕ್ಷಕ ದಿಲೀಪ್ ಕುಮಾರ್ ರಜಪೂತ್ ಸಂತ ಶ್ರೀ ಸೇವಾಲಾಲ್ ರವರ ಕುರಿತು ಮಾತನಾಡಿದರು.

ಜಾಹೀರಾತು
www.flylinkworld.com

ಕೇಂದ್ರ ಸ್ಥಾನಿಯ ಉಪತಹಸೀಲ್ದಾರ್ ನರೇಂದ್ರ ನಾಥ್ ಮಿತ್ತೂರು, ಉಪತಹಸೀಲ್ದಾರ್ ಶಿವಪ್ರಸಾದ್,   ಕರಾವಳಿ ಶ್ರೀ ಸೇವಾಲಾಲ್ ಬಂಜಾರ (ಲಂಬಾಣಿ) ಸಂಘ (ರಿ) ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಂಜುನಾಥ್ ಕೆ.ಎಚ್ ಮತ್ತು ಬಂಟ್ವಾಳ ತಾಲೂಕು ಪದಾಧಿಕಾರಿ ಕರಿಬಸಪ್ಪ ನಾಯಕ್ ಜಿ ಹಾಜರಿದ್ದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್ ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಆಡಳಿತಾಧಿಕಾರಿಗಳು ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ಉಪತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು ಸ್ವಾಗತಿಸಿ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.