ಪ್ರಮುಖ ಸುದ್ದಿಗಳು

ಮಂಗಳೂರಿನಲ್ಲಿ ಮಾನವ ಹಕ್ಕುಗಳ ಆಯೋಗದ ಸಭೆ – ವಿವರ ಇಲ್ಲಿದೆ

ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿನ ನೊಂದವರಿಗೆ ಸೂಕ್ತ ನೆರವನ್ನು ಒದಗಿಸುವ ನಿಟ್ಟಿನಲ್ಲಿ 1993ರ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮದ ಅಡಿಯಲ್ಲಿ ಸ್ಥಾಪಿತವಾಗಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು  ಫೆಬ್ರವರಿ 18 ರಂದು ಮಂಗಳೂರಿನಲ್ಲಿ ಸಭೆ ನಡೆಸಲಿದೆ. ಈ ಸಂದರ್ಭದಲ್ಲಿ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಆಯೋಗದಲ್ಲಿ ನೋಂದಣಿಯಾಗಿರುವ ಪ್ರಕರಣಗಳನ್ನು ಇರ್ತಥ್ಯಪಡಿಸಿ, ವಿಲೇ ಮಾಡಿ ಕ್ರಮ ಜರುಗಿಸಲು ಉದ್ದೇಶಿಸಲಾಗಿದೆ.

www.flylinkworld.com

ದೂರುದಾರರು ಹಾಗೂ ಪ್ರತಿವಾದಿ ಪ್ರಾಧಿಕಾರಿಗಳು ಈ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳಬಹುದು.  ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳಲ್ಲಿನ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಿಗಧಿತ ದಿನಗಳಂದು ಸಾರ್ವಜನಿಕರಿಂದ ದೂರುಗಳು / ಅಹವಾಲುಗಳನ್ನು ಸಹ ಸ್ವೀಕರಿಸಲು ಉದ್ದೇಶಿಸಲಾಗಿದೆ. ಸಾರ್ವಜನಿಕರು ಆಯೋಗದ ಅಧ್ಯಕ್ಷರನ್ನು ಹಾಗೂ ಸದಸ್ಯರನ್ನು ಸಂಪರ್ಕಿಸಿ, ದೂರುಗಳನ್ನು ಸಲ್ಲಿಸಬಹುದು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಪ್ರಕಟಣೆ ತಿಳಿಸಿದೆ

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.