ಕಜೆಕಾರಿನ ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದ ವಠಾರದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ವತಿಯಿಂದ ಪ್ರಸಿದ್ಧ ದ್ಚಾದಶ ಜ್ಯೋತಿರ್ಲಿಂಗ ದರ್ಶನ ಕಾರ್ಯಕ್ರಮ ಫೆ.೧೮ರಿಂದ ೨೩ರವರೆಗೆ ನಡೆಯಲಿದೆ ಎಂದು ರಾಜಯೋಗಿನಿ ಬ್ರಹ್ಮಕುಮಾರಿ ಸರೋಜಿನಿ ತಿಳಿಸಿದರು.
ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬ್ರಹ್ಮಕಲಶೋತ್ಸವ ಹಿನ್ನೆಲೆ ಜ್ಯೋತಿರ್ಲಿಂಗ ದರ್ಶನ ಏರ್ಪಡಿಸಲಾಗಿದೆ ಎಂದರು.
ಬ್ರಹ್ಮಕುಮಾರಿ ವಿಶ್ವವಿದ್ಯಾಲಯದಲ್ಲಿ ಜಾತಿ, ಮತ ತಾರತಮ್ಯವಿಲ್ಲದೆ ಆಧ್ಯಾತ್ಮಿಕ ಶಿಕ್ಷಣ ನೀಡಲಾಗುತ್ತಿದೆ. ಸೋಮನಾಥ, ಮಲ್ಲಿಕಾರ್ಜುನ, ಮಹಾಕಾಲೇಶ್ವರ, ಓಂಕಾರೇಶ್ವರ, ವೈದ್ಯನಾಥ, ಭೀಮಾಶಂಕರ, ರಾಮೇಶ್ವರ, ನಾಗೇಶ್ವರ, ವಿಶ್ವನಾಥ, ತ್ರಯಂಭಕೇಶ್ವರ, ಕೇದಾರನಾಥ, ಗ್ರೀಷ್ಣೇಶ್ವರ ಲಿಂಗಗಳ ದರ್ಶನ ಇರಲಿದೆ ಎಂದರು. ಈ ಸಂದರ್ಭ ಮಂಜುನಾಥ, ಪ್ರಕಾಶ್ ಉಪಸ್ಥಿತರಿದ್ದರು.