| VBGRAMG ಕುರಿತ ಜನಜಾಗೃತಿ ಹಿನ್ನೆಲೆ ಬಿಜೆಪಿಯಿಂದ ನಡೆದ ಪಾದಯಾತ್ರೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಪ್ರಶ್ನೆ

ನರೇಗಾ ಯೋಜನೆ ಹಲವು ಬಾರಿ ಹೆಸರು ಪರಿವರ್ತನೆ ಆಗಿದೆ. ನರೇಗಾದಲ್ಲಿರುವ ಕುಂದುಕೊರತೆ ನಿವಾರಿಸಿ ವಿಬಿರಾಮ್ ಜಿ ಯೋಜನೆಯನ್ನು ಪರಿಷ್ಕರಿಸಲಾಗಿದೆ. 100 ದಿನ ಇದ್ದ ಉದ್ಯೋಗ 125 ದಿನ ಆಗಿರುವುದು ಲಾಭವಾ ನಷ್ಟವಾ ಎಂದು ಜನರು ತಿಳಿದುಕೊಳ್ಳಬೇಕು ಎಂದು ಬಂಟ್ವಾಳ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.

ಬಿಜೆಪಿಯ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಝ್ ಗಾರ್ ಆಂಡ್ ಅಜೀವಿಕಾ ಮಿಷನ್ ಗ್ರಾಮೀಣ್ (ವಿಬಿಜಿಆರ್ ಎಎಂಜಿ) ಯೋಜನೆಯನ್ನಾಗಿ ಕೇಂದ್ರ ಸರಕಾರ ಮಹಾತ್ಮಾ ಗಾಂಧಿ ನರೇಗಾ ಯೋಜನೆಯನ್ನು ಪರಿಷ್ಕರಿಸಿರುವುದನ್ನು ಸಮರ್ಥಿಸಿ, ಆ ಕುರಿತು ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಬುಧವಾರ ಪಾದಯಾತ್ರೆ ಏರ್ಪಡಿಸಿತ್ತು. ಈ ಸಂದರ್ಭ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್, ಕಾಯ್ದೆ ತಿದ್ದುಪಡಿ ಮಾಡುವ ಮೂಲಕ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಜೊತೆಗೆ ಭ್ರಷ್ಟಾಚಾರಮುಕ್ತ ಮಾಡುವುದು ಕೇಂದ್ರ ಸರಕಾರದ ಗುರಿಯಾಗಿದೆ. ಬಂಟ್ವಾಳ ವಿಧಾನಸಭಾ ಕ್ಷೇತ್ರಲ್ಲಿನ ಬಹುತೇಕ ಗ್ರಾ.ಪಂ.ಗಳಲ್ಲಿ ಈ ಕಾಯ್ದೆ ಬೇಕು ಎಂದು ನಿರ್ಣಯ ಮಾಡಿ ಸರಕಾರಕ್ಕೆ ಕಳುಹಿಸಿದ್ದಾರೆ. ಇದು ಅತ್ಯಂತ ಸಂತಸದ ವಿಚಾರ. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತ್ ಗಳಿಗೆ ತೆರಳಿ ಕಾಯ್ದೆಯ ಬದಲಾದ ಸ್ವರೂಪದ ಕುರಿತು ಮಾಹಿತಿ ನೀಡುವ ಕಾರ್ಯ ಕುರಿತು ಮಾಹಿತಿ ನೀಡಬೇಕಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ ಹತಾಶೆ ಭಾವನೆಯಿಂದ ಕಾಂಗ್ರೆಸ್ ಪಕ್ಷ ವಿರೋಧ ಮಾಡುತ್ತಿದೆ. ಸಿಎಂ ಕುರ್ಚಿ ಉಳಿಸಿಕೊಳ್ಳುವ ಅಭಿಯಾನ ಪ್ರಸ್ತುತ ನಡೆಯುತ್ತಿದ್ದು, ವಿರೋಧಕ್ಕಾಗಿ ಕೇಂದ್ರ ಸರಕಾರದದ ವಿಬಿಜಿ ರಾಮ್ ಜಿ ಯೋಜನೆಯ ಕುರಿತು ಹೋರಾಟ ಮಾಡುತ್ತಿದೆ ಎಂದರು.

ಬಿ.ಸಿ.ರೋಡಿನ ಕೈಕಂಬ ಪೊಳಲಿ ದ್ವಾರದಿಂದ ಬಿಸಿರೋಡಿನವರೆಗೆ ಪಾದಯಾತ್ರೆ ನಡೆಯಿತು. ಬಂಟ್ವಾಳ ಕ್ಷೇತ್ರ ಅಧ್ಯಕ್ಷ ಆರ್.ಚೆನ್ನಪ್ಪ ಕೋಟ್ಯಾನ್, ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ, ಕ್ಷೇತ್ರದ ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ ಬಜ, ಶಿವಪ್ರಸಾದ್ ಶೆಟ್ಟಿ, ಪ್ರಮುಖರಾಧ ದಿನೇಶ್ ಅಮ್ಟೂರು, ಮಾಧವ ಮಾವೆ, ಸುಲೋಚನಾ ಜಿ.ಕೆ.ಭಟ್, ಸಂದೇಶ್ ಶೆಟ್ಟಿ ಅರೆಬೆಟ್ಟು, ರವೀಂದ್ರ ಕಂಬಳಿ, ತುಂಗಪ್ಪ ಬಂಗೇರ, ಕಮಲಾಕ್ಷಿ ಪೂಜಾರಿ, ಡೊಂಬಯ್ಯ ಅರಳ, ರಾಮ್ ದಾಸ ಬಂಟ್ವಾಳ, ಪ್ರಭಾಕರ ಪ್ರಭು, ಪುರುಷೋತ್ತಮ ಶೆಟ್ಟಿ ವಾಮದಪದವು, ದಿನೇಶ್ ಭಂಡಾರಿ, ರತ್ನಕುಮಾರ್ ಚೌಟ, ಪುರುಷೋತ್ತಮ ಸಾಲಿಯಾನ್ ನರಿಕೊಂಬು, ರೊನಾಲ್ಡ್ ಡಿಸೋಜ, ಗೋವಿಂದ ಪ್ರಭು, ಕೇಶವ ದೈಪಲ, ಸುರೇಶ್ ಕೋಟ್ಯಾನ್, ರವೀಶ್ ಶೆಟ್ಟಿ ಕರ್ಕಳ, ಸಂತೋಷ್ ರಾಯಿಬೆಟ್ಟು, ಪ್ರಣಾಮ್ ಅಜ್ಜಿಬೆಟ್ಟು, ಸಂತೋಷ್ ಕುಮಾರ್ ನರಿಕೊಂಬು ಸಹಿತ ಪಕ್ಷದ ಮಾಜಿ ಜಿಪಂ, ತಾಪಂ, ಗ್ರಾಪಂ, ಪುರಸಭೆ ಸದಸ್ಯರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ ಬಜ ಕಾರ್ಯಕ್ರಮ ಸ್ವಾಗತಿಸಿದರು. ಶಿವಪ್ರಸಾದ್ ಶೆಟ್ಟಿ ವಂದಿಸಿದರು.



Be the first to comment on "100 ದಿನ ಇದ್ದ ಉದ್ಯೋಗ 125 ದಿನ ಆಗಿರುವುದು ಲಾಭವಾ, ನಷ್ಟವಾ?"