ಬಂಟ್ವಾಳ

ಬಂಟ್ವಾಳ: ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ 20ರಿಂದ 25ವರೆಗೆ ಬ್ರಹ್ಮರಥೋತ್ಸವ ಕಾರ್ಯಕ್ರಮ

ಗೌಡ ಸಾರಸ್ವತ ಸಮಾಜದ ಆಡಳಿತಕ್ಕೊಳಪಟ್ಟ ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ 202ನೇ ವರ್ಷದ ಬ್ರಹ್ಮರಥೋತ್ಸವ ಕಾರ್ಯಕ್ರಮಗಳು ಫೆಬ್ರವರಿ 20ರಿಂದ 25ರವರೆಗೆ ನಡೆಯಲಿದೆ.

ವಿಶ್ವಾವಸು ನಾಮ ಸಂವತ್ಸರದ  ಫಾಲ್ಗುಣ ಶುದ್ಧ ತದಿಗೆ ಫೆ.20ರ ಶುಕ್ರವಾರದಿಂದ ಫಾಲ್ಗುಣ ಶುದ್ಧ ನವಮಿ ಫೆ.25 ಬುಧವಾರದವರೆಗೆ ನಡೆಯುವ 202ನೇ ವರ್ಷದ ಬ್ರಹ್ಮರಥೋತ್ಸವ ಹಿನ್ನೆಲೆ ಬುಧವಾರ ಶ್ರೀದೇವರ ಬ್ರಹ್ಮರಥವನ್ನು ಹೊರಗೆ ತೆಗೆಯಲಾಯಿತು.

www.flylinkworld.com

ಗುರುವಾರ ಶ್ರೀ ದೇವರ ಮೃತ್ತಿಕಾರೋಹಣ, 20ರಂದು ಶುಕ್ರವಾರ, ಧ್ವಜಾರೋಹಣ , ಬೆಳ್ಳಿ ಪಾಲ್ಕಿ ಹಗಲೋತ್ಸವ, ಗರುಡೋತ್ಸವ ನಡೆಯಲಿದೆ. 21ರಂದು ಶನಿವಾರ, ಬೆಳ್ಳಿ  ಪಾಲ್ಕಿ ಹಗಲೋತ್ಸವ, ಹನುಮಂತೋತ್ಸವ, 22ರಂದು ಭಾನುವಾರ ಬೆಳ್ಳಿ ಲಾಲ್ಕಿ ಹಗಲೋತ್ಸವ, ಚಂದ್ರಮಂಡಲ ಉತ್ಸವ, 23ರಂದು ಸೋಮವಾರ, ಶ್ರೀ ದೇವರ ಮೂಲ ಪ್ರತಿಷ್ಠಾ ವರ್ದಂತಿ, ಪಟ್ಟದ ದೇವರಿಗೆ ಸ್ವರ್ಣ ಪೀಠ  ಸಮರ್ಪಣೆ, ಬೆಳ್ಳಿ ಪಾಲ್ಕಿ ಹಗಲೋತ್ಸವ, ಜಲಕ್ರೀಡೆ, ಗೋಪುರೋತ್ಸವ, ಬೆಳ್ಳಿ ಲಾಲ್ಕಿ ಉತ್ಸವ, ಬೆಳ್ಳಿ ರಥೋತ್ಸವ, 24ರಂದು ಮಂಗಳವಾರ ಬ್ರಹ್ಮ ರಥೋತ್ಸವ ನಡೆಯಲಿದೆ. 25ರ ಬುಧವಾರ ಅವಭೃತ ಉತ್ಸವ, ಧ್ವಜಾವರೋಹಣ ನಡೆಯಲಿದೆ ಎಂದು ಶ್ರೀದೇವಳ ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

100 ದಿನ ಇದ್ದ ಉದ್ಯೋಗ 125 ದಿನ ಆಗಿರುವುದು ಲಾಭವಾ, ನಷ್ಟವಾ?

| VBGRAMG ಕುರಿತ ಜನಜಾಗೃತಿ ಹಿನ್ನೆಲೆ ಬಿಜೆಪಿಯಿಂದ ನಡೆದ ಪಾದಯಾತ್ರೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಪ್ರಶ್ನೆ (more…)

8 hours ago