ಬಂಟ್ವಾಳ ಬ್ರಹ್ಮರಥೋತ್ಸವ ಕಾರ್ಯಕ್ರಮ: ವಾಹನ ನಿಲುಗಡೆಗೆ ವ್ಯವಸ್ಥೆ

ಬಂಟ್ವಾಳ: ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಫೆ.20ರಿಂದ 25ವರೆಗೆ 202ನೇ ವರ್ಷದ ಬ್ರಹ್ಮರಥೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಆಗಮಿಸುವ ಭಕ್ತರಿಗೆ ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ.

www.flylinkworld.com

ಬಂಟ್ವಾಳ  ಪೋಸ್ಟ್ ಆಫೀಸ್‌ನಿಂದ ಪೂರ್ಣಿಮಾ ಸ್ಟೋರ್  ವರೆಗೆ ರಸ್ತೆ  2 ಬದಿಯಲ್ಲಿ ಯಾವುದೇ ವಾಹನವನ್ನು ನಿಲ್ಲಿಸುವುದನ್ನು ನಿಷೇಧಿಸಲಾಗಿದೆ ಹಾಗಾಗಿ ದೇವಳದ ಕಡೆಯಿಂದ ಹಾಗೂ ಸಂಚಾರ ಪೊಲೀಸ್ ಠಾಣೆ ಯ ಅಧಿಕಾರಿಗಳು ಸೂಚಿಸಿದ ಸ್ಥಳದಲ್ಲಿಯೇ ತಮ್ಮ ವಾಹನವನ್ನು ನಿಲ್ಲಿಸಿ ಸಹಕರಿಸಬೇಕಾಗಿ ವಿನಂತಿಸಲಾಗಿದೆ.

ವಿಶ್ವಾವಸು ನಾಮ ಸಂವತ್ಸರದ  ಫಾಲ್ಗುಣ ಶುದ್ಧ ತದಿಗೆ ಫೆ.20ರ ಶುಕ್ರವಾರದಿಂದ ಫಾಲ್ಗುಣ ಶುದ್ಧ ನವಮಿ ಬುಧವಾರ 25ತನಕ  202ನೇ ವರ್ಷದ ಬ್ರಹ್ಮರಥೋತ್ಸವ ಜರುಗಲಿದ್ದು ಆಗಮಿಸುವ ಭಕ್ತಾದಿಗಳಿಗೆ ವಾಹನ ನಿಲುಗಡೆಗೆ ಈ ಕೆಳಗಿನ  ಸ್ಥಳಗಳಲ್ಲಿ ವ್ಯವಸ್ಥೆ ಮಾಡಲಾಗಿದೆ

ಜಾಹೀರಾತು

1. ಮಂಗಳೂರು, ಪುತ್ತೂರು, ಉಪ್ಪಿನಂಗಡಿ ಕಡೆಯಿಂದ ಬರುವವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ   ಹಿಂಬದಿಯ ಜಾಗದಲ್ಲಿ ಹಾಗೂ  ದೇವಳದ  ಸಮೀಪ ಇರುವ  ಶಾಲಾ ರಸ್ತೆಯ ಮೂಲಕ  ಎಸ್ ವಿ ಎಸ್ ದೇವಳದ ವಿದ್ಯಾ ಸಂಸ್ಥೆಯ ವಠಾರದಲ್ಲಿ ನಿಲ್ಲಿಸುವಂತೆ ವಿನಂತಿಸಲಾಗಿದೆ

2. ಮೂಡಬಿದರೆ , ಕಾರ್ಕಳ, ಕಡೆಯಿಂದ ಬರುವ ವಾಹನಗಳು ಬೈಪಾಸ್ ಜಂಕ್ಷನ್  ನಿಂದ ಬಂಟ್ವಾಳ ಪೇಟೆ ರಸ್ತೆಯಲ್ಲಿ ದೇವರಕಟ್ಟೆಯ ಬಸ್ ನಿಲ್ದಾಣದಲ್ಲಿ ಹಾಗೂ ಅದರ ಎದುರು ಇರುವ  ವಿಶಾಲ ಮೈದಾನದಲ್ಲಿ ವಾಹನವನ್ನು ನಿಲ್ಲಿಸುವಂತೆ ವಿನಂತಿಸಲಾಗಿದೆ.

3. ಪುಂಜಾಲ್ ಕಟ್ಟೆ, ಗುರುವಾಯನಕೆರೆ, ಬೆಳ್ತಂಗಡಿ ಉಜಿರೆ ಕಡೆಯಿಂದ ಬರುವ ಭಕ್ತಾದಿಗಳು ಜಕ್ರಿಬೆಟ್ಟಿನಿಂದ ಬಂಟ್ವಾಳ ಪೇಟೆಯ ರಸ್ತೆಯಿಂದ ಕೊಟ್ರಮಣಗಂಡಿ ಮೂಲಕ ದೇವರಕಟ್ಟೆಯ ಬಸ್ ನಿಲ್ದಾಣ ಹಾಗೂ ಅದರ ಎದುರು ಇರುವಂಥ ವಿಶಾಲ ಮೈದಾನದಲ್ಲಿ ನಿಲ್ಲಿಸುವಂತೆ ವಿನಂತಿಸಲಾಗಿದೆ.

ದ್ವಿಚಕ್ರ ವಾಹನ ಸವಾರರು ತಮ್ಮ ವಾಹನವನ್ನು ಎಲ್ಲೆಂದರಲ್ಲಿ ನಿಲ್ಲಿಸುವ ಬದಲು ಮೇಲೆ ತಿಳಿಸಿದ ಸ್ಥಳದಲ್ಲಿ ನಿಲ್ಲಿಸಿ ಸಹಕರಿಸುವಂತೆ ಆಡಳಿತ ಮಂಡಳಿ ವತಿಯಿಂದ ವಿನಂತಿಸಲಾಗಿದೆ

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ಬ್ರಹ್ಮರಥೋತ್ಸವ ಕಾರ್ಯಕ್ರಮ: ವಾಹನ ನಿಲುಗಡೆಗೆ ವ್ಯವಸ್ಥೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*