ಬಂಟ್ವಾಳ: ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಫೆ.20ರಿಂದ 25ವರೆಗೆ 202ನೇ ವರ್ಷದ ಬ್ರಹ್ಮರಥೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಆಗಮಿಸುವ ಭಕ್ತರಿಗೆ ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ಬಂಟ್ವಾಳ ಪೋಸ್ಟ್ ಆಫೀಸ್‌ನಿಂದ ಪೂರ್ಣಿಮಾ ಸ್ಟೋರ್ ವರೆಗೆ ರಸ್ತೆ 2 ಬದಿಯಲ್ಲಿ ಯಾವುದೇ ವಾಹನವನ್ನು ನಿಲ್ಲಿಸುವುದನ್ನು ನಿಷೇಧಿಸಲಾಗಿದೆ ಹಾಗಾಗಿ ದೇವಳದ ಕಡೆಯಿಂದ ಹಾಗೂ ಸಂಚಾರ ಪೊಲೀಸ್ ಠಾಣೆ ಯ ಅಧಿಕಾರಿಗಳು ಸೂಚಿಸಿದ ಸ್ಥಳದಲ್ಲಿಯೇ ತಮ್ಮ ವಾಹನವನ್ನು ನಿಲ್ಲಿಸಿ ಸಹಕರಿಸಬೇಕಾಗಿ ವಿನಂತಿಸಲಾಗಿದೆ.
ವಿಶ್ವಾವಸು ನಾಮ ಸಂವತ್ಸರದ ಫಾಲ್ಗುಣ ಶುದ್ಧ ತದಿಗೆ ಫೆ.20ರ ಶುಕ್ರವಾರದಿಂದ ಫಾಲ್ಗುಣ ಶುದ್ಧ ನವಮಿ ಬುಧವಾರ 25ತನಕ 202ನೇ ವರ್ಷದ ಬ್ರಹ್ಮರಥೋತ್ಸವ ಜರುಗಲಿದ್ದು ಆಗಮಿಸುವ ಭಕ್ತಾದಿಗಳಿಗೆ ವಾಹನ ನಿಲುಗಡೆಗೆ ಈ ಕೆಳಗಿನ ಸ್ಥಳಗಳಲ್ಲಿ ವ್ಯವಸ್ಥೆ ಮಾಡಲಾಗಿದೆ
1. ಮಂಗಳೂರು, ಪುತ್ತೂರು, ಉಪ್ಪಿನಂಗಡಿ ಕಡೆಯಿಂದ ಬರುವವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹಿಂಬದಿಯ ಜಾಗದಲ್ಲಿ ಹಾಗೂ ದೇವಳದ ಸಮೀಪ ಇರುವ ಶಾಲಾ ರಸ್ತೆಯ ಮೂಲಕ ಎಸ್ ವಿ ಎಸ್ ದೇವಳದ ವಿದ್ಯಾ ಸಂಸ್ಥೆಯ ವಠಾರದಲ್ಲಿ ನಿಲ್ಲಿಸುವಂತೆ ವಿನಂತಿಸಲಾಗಿದೆ
2. ಮೂಡಬಿದರೆ , ಕಾರ್ಕಳ, ಕಡೆಯಿಂದ ಬರುವ ವಾಹನಗಳು ಬೈಪಾಸ್ ಜಂಕ್ಷನ್ ನಿಂದ ಬಂಟ್ವಾಳ ಪೇಟೆ ರಸ್ತೆಯಲ್ಲಿ ದೇವರಕಟ್ಟೆಯ ಬಸ್ ನಿಲ್ದಾಣದಲ್ಲಿ ಹಾಗೂ ಅದರ ಎದುರು ಇರುವ ವಿಶಾಲ ಮೈದಾನದಲ್ಲಿ ವಾಹನವನ್ನು ನಿಲ್ಲಿಸುವಂತೆ ವಿನಂತಿಸಲಾಗಿದೆ.
3. ಪುಂಜಾಲ್ ಕಟ್ಟೆ, ಗುರುವಾಯನಕೆರೆ, ಬೆಳ್ತಂಗಡಿ ಉಜಿರೆ ಕಡೆಯಿಂದ ಬರುವ ಭಕ್ತಾದಿಗಳು ಜಕ್ರಿಬೆಟ್ಟಿನಿಂದ ಬಂಟ್ವಾಳ ಪೇಟೆಯ ರಸ್ತೆಯಿಂದ ಕೊಟ್ರಮಣಗಂಡಿ ಮೂಲಕ ದೇವರಕಟ್ಟೆಯ ಬಸ್ ನಿಲ್ದಾಣ ಹಾಗೂ ಅದರ ಎದುರು ಇರುವಂಥ ವಿಶಾಲ ಮೈದಾನದಲ್ಲಿ ನಿಲ್ಲಿಸುವಂತೆ ವಿನಂತಿಸಲಾಗಿದೆ.
ದ್ವಿಚಕ್ರ ವಾಹನ ಸವಾರರು ತಮ್ಮ ವಾಹನವನ್ನು ಎಲ್ಲೆಂದರಲ್ಲಿ ನಿಲ್ಲಿಸುವ ಬದಲು ಮೇಲೆ ತಿಳಿಸಿದ ಸ್ಥಳದಲ್ಲಿ ನಿಲ್ಲಿಸಿ ಸಹಕರಿಸುವಂತೆ ಆಡಳಿತ ಮಂಡಳಿ ವತಿಯಿಂದ ವಿನಂತಿಸಲಾಗಿದೆ
| VBGRAMG ಕುರಿತ ಜನಜಾಗೃತಿ ಹಿನ್ನೆಲೆ ಬಿಜೆಪಿಯಿಂದ ನಡೆದ ಪಾದಯಾತ್ರೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಪ್ರಶ್ನೆ (more…)