ಮಾರ್ಚ್ 3ರಂದು ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಆಗ್ರಹಿಸಿ ಸಾಮೂಹಿಕ ಧರಣಿ

| ಬಿ.ಸಿ.ರೋಡಿನಲ್ಲಿ ಸಮಾಲೋಚನಾ ಸಭೆ | ಹೋರಾಟ ಸಮಿತಿ ಅಸ್ತಿತ್ವಕ್ಕೆ

www.flylinkworld.com

ಹತ್ತು ವರ್ಷಕ್ಕೂ ಅಧಿಕ ಕಾಲದಿಂದ ಬ್ರಹ್ಮರಕೂಟ್ಲುವಿನಲ್ಲಿ ಕಾರ್ಯಾಚರಿಸುತ್ತಿರುವ ಟೋಲ್ ಗೇಟ್ ತೆರವುಗೊಳಿಸಬೇಕು ಎಂಬ ಕುರಿತು ಬಿ.ಸಿ.ರೋಡಿನಲ್ಲಿ ಸಮಾನ ಮನಸ್ಕ ಸಂಘಟನೆಗಳು ಒಟ್ಟು ಸೇರಿ ಗುರುವಾರ ಸಮಾಲೋಚನಾ ಸಭೆ ನಡೆಸಿತು. ಈ ವೇಳೆ ಮಾರ್ಚ್ 3ರಂದು ಟೋಲ್ ತೆರವು ಆಗ್ರಹಿಸಿ ಸಾಮೂಹಿಕ ಧರಣಿ ನಡೆಸುವ ಕುರಿತು ನಿರ್ಧರಿಸಲಾಯಿತು.

ಮಾಜಿ ಸಚಿವ ಬಿ ರಮಾನಾಥ ರೈ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಾನ ಮನಸ್ಕ ವಿವಿಧ ಸಂಘಟನೆಗಳು, ಪಕ್ಷಗಳಿಗೆ ಸೇರಿದ ಪ್ರತಿನಿಧಿಗಳು ಭಾಗವಹಿಸಿದ್ದರು. ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಟೋಲ್ ಗೇಟ್ ತೆರವಿಗೆ ನಡೆಸಬೇಕಾದ ಮುಂದಿನ ಹೋರಾಟಗಳ ಕುರಿತು ಮಾರ್ಗದರ್ಶನ ಮಾಡಿದರು.

ಜಾಹೀರಾತು

ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಹೋರಾಟ ಸಮಿತಿ, ಬಂಟ್ವಾಳ ರಚಿಸಲು, ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವುಗೊಳ್ಳುವವರೆಗೂ ಅವಿರತ ಹೋರಾಟ ನಡೆಸಲು ಸಭೆ ನಿರ್ಧರಿಸಿತು.

ಹೋರಾಟ ಸಮಿತಿಗೆ ಬಿ ರಮಾನಾಥ ರೈ ಅವರನ್ನು ಗೌರವಾಧ್ಯಕ್ಷರಾಗಿ, ಬಿ ಶೇಖರ್ ಹಾಗು ಮೋಹನ್ ಶೆಟ್ಟಿ ಅವರನ್ನು ಸಂಚಾಲಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಮುಂದಿನ ದಿನದಲ್ಲಿ ಸಮಾನ ಮನಸ್ಕರಾದ ಎಲ್ಲರನ್ನು‌ ಒಳಗೊಂಡ ಸಮಾವೇಶ ನಡೆಸಿ ಪೂರ್ಣಪ್ರಮಾಣದ ಸಮಿತಿ ರಚಿಸಲು ತೀರ್ಮಾನಿಸಲಾಯಿತು.

ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ನೂತನ ಸಮಿತಿ ವತಿಯಿಂದ, ಸಮಾನ ಮನಸ್ಕ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಮಾರ್ಚ್ 3ರಂದು ಬ್ರಹ್ಮರಕೂಟ್ಲು ಟೋಲ್ ಗೇಟ್ ಸಮೀಪ ಬೆಳಿಗ್ಗೆ 9ರಿಂದ ಮಧ್ಯಾಹ್ನ 12ವರಗೆ ಬೃಹತ್ ಸಾಮೂಹಿಕ ಧರಣಿ ನಡೆಸುವುದಾಗಿ ಸಭೆ ತೀರ್ಮಾನಿಸಿತು. ಮುಂದಿನ ಹಂತದಲ್ಲಿ ಮತ್ತಷ್ಟು ತೀವ್ರತರವಾದ ಹೋರಾಟ ಸಂಘಟಿಸುವುದು, ಟೋಲ್ ಗೇಟ್ ತೆರವು ಗೊಳಿಸಿಯೇ ವಿಶ್ರಮಿಸುವುದು ಎಂದು ಸಭೆ ಘೋಷಿಸಿತು. ಸಭೆಯಲ್ಲಿ ನಾನಾ ಪಕ್ಷಗಳ, ಸಂಘಟನೆಗಳ ಮುಖಂಡರು ಹಾಜರಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

1 Comment on "ಮಾರ್ಚ್ 3ರಂದು ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಆಗ್ರಹಿಸಿ ಸಾಮೂಹಿಕ ಧರಣಿ"

  1. Jagadeesh Yadapadithaya | February 20, 2026 at 3:45 pm | Reply

    This is really a good job, We are there for the support. One of the useless unscientific Toll gate in the dakshina kannada

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*