ಬಂಟ್ವಾಳ

ತಾಲೂಕು ಆಡಳಿತ ಸೌಧದಲ್ಲಿ ಶಿವಾಜಿ ಜಯಂತಿ ಆಚರಣೆ

shivaji jayanthi program

ತಾಲೂಕು ಮಟ್ಟದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಗುರುವಾರ ಛತ್ರಪತಿ ಶಿವಾಜಿ ಜಯಂತಿ ಆಚರಣೆ ನಡೆಯಿತು.

www.flylinkworld.com

ಈ ಸಂದರ್ಭ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಪ್ರಣಾಮ್ ರಾಜ್ ಅಜ್ಜಿಬೆಟ್ಟು, ಶಿವಾಜಿ ಮಹಾರಾಜರು ನಮ್ಮ ದೇಶದ ಇತಿಹಾಸದ ಪರಂಪರೆಯನ್ನು ಜಾಗೃತಿಗೊಳಿಸುವಂತೆ ಮಾಡಿದವರು. ಶಿವಾಜಿ ತಾಯಿ ಮಕ್ಕಳನ್ನು ಹೇಗೆ ಬೆಳೆಸಬೇಕು ಎಂಬುದಕ್ಕೆ ಆದರ್ಶವಾಗಿದ್ದರೆ, ರಾಷ್ಟ್ರದ ರಕ್ಷಣೆ, ನಮ್ಮ ಸ್ವಾಭಿಮಾನದ ಸಂರಕ್ಷಣೆಯನ್ನು ಮಾಡುವುದಕ್ಕೆ ಮೊದಲ ಆದ್ಯತೆ ನೀಡಿದವರು ಛತ್ರಪತಿ ಶಿವಾಜಿ. ಸಮಾಜ ನಿರ್ಮಾಣ ಕಾರ್ಯವನ್ನು ಅವರು ಮಾಡಿದ್ದಾರೆ ಎಂದರು.

ಉಪತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು ಪ್ರಾಸ್ತಾವಿಕವಾಗಿ ಮಾತನಾಡಿ, ಜಯಂತಿ ಆಚರಣೆ ಆಶಯವನ್ನು ವಿವರಿಸಿದರು. ಉಪತಹಸೀಲ್ದಾರ್ ಶಿವಪ್ರಸಾದ್, ಕಂದಾಯ ನಿರೀಕ್ಷಕ ವಿಜಯ್ ಆರ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷುಕುಮಾರ್ ಸೇರಿದಂತೆ ತಾಲೂಕು ಕಚೇರಿಯ ಸಿಬ್ಬಂದಿ ಹಾಜರಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.